Share this news

ಬೆಂಗಳೂರು : ರಾಜ್ಯ ಸರ್ಕಾರವು ಪಡಿತರ ಚೀಟಿದಾರರಿಗೆ ಸಿಹಿಸುದ್ದಿ ನೀಡಿದ್ದು, ಬಿಪಿಎಲ್, ಎಪಿಎಲ್ ಸೇರಿ ಪಡಿತರ ಚೀಟಿಯಲ್ಲಿನ ಹೆಸರು ಸೇರ್ಪಡೆ ಹಾಗೂ ತಿದ್ದುಪಡಿಗೆ ಮತ್ತೊಮ್ಮೆ ಅವಕಾಶ ನೀಡಿದೆ.

ರಾಜ್ಯದ ಹಲವು ಜಿಲ್ಲೆಗಳಲ್ಲಿ ಸರ್ವರ್ ಸಮಸ್ಯೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಮತ್ತೊಮ್ಮೆ ಪಡಿತರ ಚೀಟಿದಾರರಿಗೆ ಸೇರ್ಪಡೆ/ತಿದ್ದುಪಡಿಗೆ ಅವಕಾಶ ನೀಡಿದ್ದು, 2 ಮತ್ತು 3ನೇ ಹಂತದ ಜಿಲ್ಲೆಗಳಿಗೆ ಮಾತ್ರ ಅಕ್ಟೋಬರ್ 16 ರಿಂದ 21 ರವರೆಗೆ ಬೆಳಗ್ಗೆ 10 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ತಿದ್ದುಪಡಿಗೆ ಅವಕಾಶ ನೀಡಿದೆ.

ಅ.16 ರಿಂದ 18 ರವರೆಗೆ ಬಾಗಲಕೋಟೆ, ಬೆಳಗಾವಿ, ಚಾಮರಾಜಪೇಟೆ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಧಾರವಾಡ, ಗದಗ, ಹಾಸನ, ಹಾವೇರಿ, ಕೊಡಗು, ಮಂಡ್ಯ, ಮೈಸೂರು, ಉಡುಪಿ, ಉತ್ತರ ಕನ್ನಡ, ವಿಜಯಪುರ ಜಿಲ್ಲೆಗಳಲ್ಲಿ ತಿದ್ದುಪಡಿಗೆ ಅವಕಾಶ.

ಅ. 19 ರಿಂದ 21 ರವರೆಗೆ ಬಳ್ಳಾರಿ, ಬಿದರ್, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ , ಕಲಬುರಗಿ, ಕೋಲಾರ, ಕೊಪ್ಪಳ, ರಾಯಚೂರು, ರಾಮನಗರ, ಶಿವಮೊಗ್ಗ, ತುಮಕೂರು, ಯಾದಗಿರಿ, ವಿಜಯನಗರ ಜಿಲ್ಲೆಗಳಲ್ಲಿ ತಿದ್ದುಪಡಿಗೆ ಅವಕಾಶ ನೀಡಿದೆ.

ಈ ಹಿಂದೆ ಆಹಾರ ಇಲಾಖೆ ಅ.5 ರಿಂದ 13ರವರೆಗೆ ತಿದ್ದುಪಡಿ ಮಾಡಿಕೊಳ್ಳಲು ಕಾಲಾವಕಾಶ ನೀಡಿತ್ತು. ಸರ್ವರ್ ಸಮಸ್ಯೆ ಹಿನ್ನೆಲೆಯಲ್ಲಿ ಇದೀಗ ಮತ್ತೊಮ್ಮೆ ತಿದ್ದುಪಡಿಗೆ ಅವಕಾಶ ನೀಡಿದೆ.

 

 

 

 

 

 

 

 

 

 

 

 

 

 

 

 

 

 

 

 

Leave a Reply

Your email address will not be published. Required fields are marked *