ಮುಲ್ಕಿ: ಪಡುಪಣಂಬೂರು ಗ್ರಾಮ ಪಂಚಾಯತ್ ವತಿಯಿಂದ ಸ್ವಂತ ನಿಧಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳಿಗೆ ಸಮವಸ್ತ್ರ ಮತ್ತು ಪುಸ್ತಕ ವಿತರಣೆ ಹಾಗೂ ವಿವಿಧ ಫಲಾನುಭವಿಗಳಿಗೆ ಚೆಕ್ ವಿತರಣೆ ಕಾರ್ಯಕ್ರಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಂಚಾಯತ್ ಅಧ್ಯಕ್ಷೆ ವಹಿಸಿದ್ದರು. ಫಲಾನುಭವಿಗಳಿಗೆ ಸವಲತ್ತು ವಿತರಿಸಿ ಶಾಸಕ ಉಮಾನಾಥ ಕೋಟ್ಯಾನ್ ಮಾತನಾಡಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಮೂಡಬಿದ್ರೆ ಪುರಸಭೆಗೆ 166 ಕೋಟಿ ಹಣ ಮೂಡಬಿದ್ರೆಗೆ ಮಂಜೂರಾಗಿದ್ದು ಅದೇ ರೀತಿ ಗುರುಪುರ ನದಿಯಿಂದ ಮುಲ್ಕಿ ತಾಲೂಕು ವ್ಯಾಪ್ತಿಗೆ 132 ಕೋಟಿ ರೂಪಾಯಿಯಲ್ಲಿ ಕಿನ್ನಿಗೋಳಿ,ಬಜಪೆ,ಮುಲ್ಕಿ ಪಟ್ಟಣ ಪಂಚಾಯಿತಿಗೆ ಮಂಜೂರಾಗಿದ್ದು ಶೀಘ್ರವೇ ಅನುಷ್ಠಾನಗೊಳಿಸಲಾಗುವುದುಮುಲ್ಕಿಯಲ್ಲಿ 3 ಕೋಟಿ ವೆಚ್ಚದ ಬಸ್ ನಿಲ್ದಾಣ ಸದ್ಯದಲ್ಲಿ ಆರಂಭಗೊಳ್ಳಲಿದ್ದು ಮೂಲಭೂತ ಸೌಕರ್ಯಗಳ ಅಭಿವೃದ್ಧಿ ನಿರಂತರವಾಗಿ ನಡೆಯಲಿದೆ ಎಂದರು.
ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಪಂಚಾಯತ್ ಉಪಾಧ್ಯಕ್ಷೆ ಕುಸುಮ ಚಂದ್ರಶೇಖರ್, ಮಾಜೀ ಅಧ್ಯಕ್ಷರಾದ ವಿನೋದ್ ಸಾಲ್ಯಾನ್,ಮೋಹನ್ ದಾಸ್ ಸದಸ್ಯರಾದ ಹೇಮನಾಥ, ಹರಿಪ್ರಸಾದ್, ದಿನೇಶ್ ಹೊಸಲಕ್ಕೆ ,ತಾಲ್ಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಇ.ಒಲೋಕೇಶ್ ಮತ್ತಿತರರು ಉಪಸ್ಥಿತರಿದ್ದರು.
ಒಟ್ಟು 52 ಫಲಾನುಭವಿಗಳಿಗೆ ಸವಲತ್ತು ವಿತರಿಸಲಾಯಿತು. ನೂತನವಾಗಿ ಎರಡನೇ ಬಾರಿ ಆಯ್ಕೆಯಾದ ಮುಲ್ಕಿ ಮೂಡಬಿದ್ರೆ ಕ್ಷೇತ್ರದ ಶಾಸಕ ಉಮಾನಾಥ ಕೋಟ್ಯಾನ್ ಅವರನ್ನು ಗೌರವಿಸಲಾಯಿತು.