ಮುಲ್ಕಿ: ಗಾಂಧಿ ಜಯಂತಿಯ ಪ್ರಯುಕ್ತ ಮೋದಿಜಿಯವರ ಬಹು ದೊಡ್ಡ ಯೋಜನೆಯಾದ ಸ್ವಚ್ಛತಾ ಆಂದೋಲನದ ಅಂಗವಾಗಿ ಪಡು ಪಣಂಬೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಪರಿಸರದಲ್ಲಿ ಸ್ವಚ್ಛತಾ ಹೀ ಸೇವಾ ಯೋಜನೆಯಡಿ ಬೃಹತ್ ಸ್ವಚ್ಛತಾ ಕಾರ್ಯಕ್ರಮ ನಡೆಯಿತು .
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕುಸುಮಾ ಚಂದ್ರಶೇಖರ್, ಉಪಾಧ್ಯಕ್ಷರಾದ ಹೇಮಂತ್ ಅಮೀನ್, ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾದ ಸುಧೀರ್, ಕಾರ್ಯದರ್ಶಿಯಾದ ಸುಜಾತ, ಮತ್ತು ಪಂಚಾಯತ್ ಸಿಬ್ಬಂದಿಗಳು , ಸ್ಥಳೀಯರಾದ ಮಾದವ ಶೆಟ್ಟಿ, ಜನಾರ್ದನ ಪಡು ಪಣಂಬೂರು, ಅಂಗನವಾಡಿ ಕೇಂದ್ರದ ಕಾರ್ಯಕರ್ತೆ, ಆಶಾ ಕಾರ್ಯಕರ್ತೆಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.