Share this news

ಕಾರ್ಕಳ: ತುಳುನಾಡಿನ ಸೃಷ್ಟಿಕರ್ತ ಪರಶುರಾಮ ಸಮಸ್ತ ತುಳುನಾಡಿಗೆ ಹೆಮ್ಮೆ, ಪರಶುರಾಮನ ಉತ್ಸವ ನಮ್ಮೆಲ್ಲರ ಉತ್ಸವ ಹಾಗಾಗಿ ಕಾರ್ಕಳದ ಪ್ರತಿಯೊಂದು ಮನೆಯಿಂದ ಉತ್ಸವದಲ್ಲಿ ಪಾಲ್ಗೊಳ್ಳಬೇಕೆಂದು ಸಚಿವ ಸುನಿಲ್ ಕುಮಾರ್ ಹೇಳಿದರು.

ಅವರು ಮಂಗಳವಾರ ಪರಶುರಾಮ ಪ್ರತಿಮೆ ಲೋಕಾರ್ಪಣೆ ಕಾರ್ಯಕ್ರಮದ ಪೂರ್ವಭಾವಿಯಾಗಿ ವಿದ್ಯುತ್ ದೀಪಾಲಂಕಾರವನ್ನು ಉದ್ಘಾಟಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಣಿರಾಜ ಶೆಟ್ಟಿ, ಬೋಳ ಪ್ರಭಾಕರ ಕಾಮತ್, ಎಸ್ಪಿ ಹಾಕೆ ಅಕ್ಷಯ್ ಮಚಿಂದ್ರಾ,ತಹಶೀಲ್ದಾರ್ ಪ್ರದೀಪ್ ಕುರ್ಡೇಕರ್ ಮುಂತಾದವರು ಉಪಸ್ಥಿತರಿದ್ದರು

Leave a Reply

Your email address will not be published. Required fields are marked *