ಕಾರ್ಕಳ: ಉಡುಪಿ ಜಿಲ್ಲೆಯ ಐತಿಹಾಸಿಕ ಪ್ರವಾಸಿ ತಾಣವಾಗಿರುವ ಪರಶುರಾಮ ಥೀಮ್ ಪಾರ್ಕ್ ಯೋಜನೆಯ ಕುರಿತು ಹಬ್ಬಿಸುತ್ತಿರುವ ಊಹಾಪೋಹ ಹಾಗೂ ಸುಳ್ಳು ಆರೋಪಗಳಿಗೆ ಒಂದು ಪೂರ್ಣ ವಿರಾಮ ಬೇಕಿತ್ತು. ಈ ಸುಳ್ಳು ಆರೋಪಗಳ ತನಿಖೆಗಾಗಿ ರಾಜ್ಯ ಸರ್ಕಾರ ಕೊನೆಗೂ ಸಿಐಡಿ ತನಿಖೆಗೆ ವಹಿಸಿರುವುದನ್ನು ಸ್ವಾಗತಿಸುತ್ತೇನೆ ಎಂದು ಶಾಸಕ ಹಾಗೂ ಮಾಜಿ ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ.
ಪರಶುರಾಮ ಥೀಮ್ ಪಾರ್ಕ್ ಕಾಮಗಾರಿಯಲ್ಲಿ ಅವ್ಯವಹಾರ ನಡೆದಿದೆ ಎಂಬ ಆರೋಪದ ಕುರಿತು ಸಮಗ್ರ ತನಿಖೆ ನಡೆಯಬೇಕೆಂದು ಆರು ತಿಂಗಳು ಹಿಂದೆಯೇ ನಾನು ಆಗ್ರಹಿಸಿದ್ದೆ,ಆದರೆ ಸರ್ಕಾರ ಯಾವುದೇ ಕ್ರಮಕೈಗೊಂಡಿರಲಿಲ್ಲ,ಆದರೆ ಇದೀಗ ಸರ್ಕಾರ ತನಿಖೆಗೆ ಮುಂದಾಗಿದೆ, ಆದಷ್ಟು ಶೀಘ್ರ ತನಿಖೆ ಪೂರ್ಣಗೊಳಿಸುವ ಜತೆಗೆ ಥೀಂ ಪಾರ್ಕ್ ಅಭಿವೃದ್ಧಿಗೆ ಹಿಂದಿನ ಸರ್ಕಾರದ ಅವಧಿಯಲ್ಲಿ ತಾತ್ವಿಕ ಒಪ್ಪಿಗೆ ನೀಡಿದ ಬಾಕಿ ಹಣವನ್ನೂ ಬಿಡುಗಡೆ ಮಾಡಿ ಕಾಮಗಾರಿ ಪೂರ್ಣಗೊಳಿಸಬೇಕು. ಆದಷ್ಟು ಬೇಗ ಥೀಂ ಪಾರ್ಕ್ ಪ್ರವಾಸಿಗಳ ವೀಕ್ಷಣೆಗೆ ಮುಕ್ತಗೊಳ್ಳುವಂತಾಗಬೇಕೆಂದು ಸುನಿಲ್ ಕುಮಾರ್ ಒತ್ತಾಯಿಸಿದ್ದಾರೆ.
ಇದಲ್ಲದೇ ಸಿಐಡಿ ತನಿಖೆಗೆ ಒತ್ತಾಯ ಹಾಗೂ ಮುತುವರ್ಜಿ ತೋರಿದ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಸುನಿಲ್ ಕುಮಾರ್ ಅಭಿನಂದನೆ ಸಲ್ಲಿಸಿದ್ದಾರೆ.
ಉಡುಪಿ, ಮಂಗಳೂರಿನಲ್ಲಿ ಕೆಲಸ ಬೇಕೇ? ಸರ್ಕಾರಿ, ಅರೆಸರ್ಕಾರಿ, ಖಾಸಗಿ ಕಂಪೆನಿಗಳ ಉದ್ಯೋಗಾವಕಾಶಗಳ ಕುರಿತ ಸಂಪೂರ್ಣ ವಿವರಗಳಿಗೆ ಈ ಲಿಂಕ್ ಕ್ಲಿಕ್ ಮಾಡಿ