ಉಡುಪಿ: ಕಾರ್ಕಳ ತಾಲೂಕಿನ ಬೈಲೂರು ಪರಶುರಾಮ ಥೀಮ್ ಪಾರ್ಕ್ ವಿರುದ್ಧದ ಆರೋಪ ಪ್ರತ್ಯಾರೋಪಗಳ ಕುರಿತು ಪರಿಶೀಲನೆ ನಡೆಸಲಾಗುತ್ತಿದೆ. ಈ ಕುರಿತು ಹೋರಾಟಗಾರರ ಆರೋಪ ಮತ್ತು ಬೇಡಿಕೆಗಳ ಕುರಿತ ಸಂಪೂರ್ಣ ಮಾಹಿತಿಯನ್ನು ರಾಜ್ಯ ಸರಕಾರಕ್ಕೆ ನೀಡಲಾಗಿದ್ದು, ಸರ್ಕಾರ ಮುಂದಿನ ನಿರ್ದೇಶನದಂತೆ ಜಿಲ್ಲಾಡಳಿತ ಮುಂದಿನ ಕ್ರಮ ಕೈಗೊಳ್ಳಲಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾ ಕುಮಾರಿ ತಿಳಿಸಿದ್ದಾರೆ.

ಅವರು ಉಡುಪಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಒಟ್ಟು 12.5 ಕೋಟಿ ರೂ. ವೆಚ್ಚದಲ್ಲಿ ಥೀಮ್ಪಾರ್ಕ್ ಕಾಮಗಾರಿಗೆ ಪ್ರವಾಸೋದ್ಯಮ ಇಲಾಖೆಯಿಂದ ಎರಡು ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದೆ. ಉಳಿದಂತೆ ಯಾವುದೇ ಇಲಾಖೆಯಿಂದ ಹಣ ನೀಡಿಲ್ಲ. ಈ ಕಾಮಗಾರಿಗೆ ಪ್ರವಾಸೋದ್ಯಮ ಇಲಾಖೆ ಆಡಳಿತ್ಮಾಕ ಅನುಮೋದನೆ ನೀಡಿರುವುದರಿಂದ ಈಗಾಗಲೇ ಈ ಕುರಿತು ಮಾಹಿತಿಯನ್ನು ಅವರಿಗೆ ನೀಡಲಾಗಿದೆ.ಈ ಕುರಿತು ಪತ್ರ ಕೂಡ ಬರೆಯಲಾಗಿದೆ ಎಂದರು.





