ಮುಲ್ಕಿ: ಭಾರತ ಸರಕಾರದ ಯುವ ಕಾರ್ಯ ಮತ್ತು ನೆಹರು ಯುವ ಕೇಂದ್ರ ಮಂಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮಂಗಳೂರು, ಗ್ರಾಮ ಪಂಚಾಯತ್ ಪಡುಪಣಂಬೂರು ಇವರ ಆಶ್ರಯದಲ್ಲಿ ಫೇಮಸ್ ಯೂತ್ ಕ್ಲಬ್ (ರಿ) ಮತ್ತು ಮಹಿಳಾ ಮಂಡಲ 10ನೇ ತೋಕೂರು ಇದರ ವತಿಯಿಂದ ವನಮಹೋತ್ಸವ ಸಪ್ತಾಹ ಜು.2 ರಂದು ನಡೆಯಿತು.

ಮುಲ್ಕಿ- ಮೂಡಬಿದ್ರಿ ಕ್ಷೇತ್ರದ ಶಾಸಕರಾದ ಉಮಾನಾಥ ಕೋಟ್ಯಾನ್ ವನಮಹೋತ್ಸವಕ್ಕೆ ಚಾಲನೆ ನೀಡಿ, ಪರಿಸರ ರಕ್ಷಣೆ ಭೂಮಿಯ ಮೇಲೆ ಹುಟ್ಟಿದ ಪ್ರತಿಯೊಬ್ಬ ವ್ಯಕ್ತಿಯ ಆದ್ಯ ಕರ್ತವ್ಯ, ಈ ಪರಿಸರ ರಕ್ಷಣೆಯ ಜವಾಬ್ದಾರಿಯನ್ನು ಯುವ ಸಂಘಟನೆಗಳು ಅತ್ಯಂತ ಹೆಚ್ಚು ಜವಾಬ್ದಾರಿಯುತವಾಗಿ ನಿಭಾಯಿಸಿದಲ್ಲಿ ಮುಂದಿನ ಪೀಳಿಗೆಗೆ ಒಂದು ಉತ್ತಮ ಪರಿಸರವನ್ನು ರೂಪಿಸಲು ಸಹಕಾರಿಯಾಗುತ್ತದೆ ಎಂದರು.

ಪಡುಪಣAಬೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಮಂಜುಳಾ ಅಧ್ಯಕ್ಷತೆ ವಹಿಸಿ ಮಾತನಾಡಿ, ಇಂದಿನ ದಿನಗಳಲ್ಲಿ ಪರಿಸರ ಸಂರಕ್ಷಣೆಯನ್ನು ಪ್ರತಿಯೊಬ್ಬರೂ ಸಂಘಟಿತರಾಗಿ ನಡೆಸಸಬೇಕಾದ ಅನಿವಾರ್ಯತೆ ಇದೆ ಎಂದರು.

ಪಡುಪಣAಬೂರು ಗ್ರಾಮ ಪಂಚಾಯತ್ ಸದಸ್ಯರಾದ ಜ್ಯೋತಿ ಮತ್ತು ಅನಿಲ್, ಸುಕೇಶ್ ಶಿರ್ತಾಡಿ, ತಾಲೂಕು ಪಂಚಾಯತ್ ನಿಕಟ ಪೂರ್ವ ಸದಸ್ಯರಾದ ದಿವಾಕರ ಕರ್ಕೇರ, ಮೂಲ್ಕಿ ಪತ್ರಕರ್ತರ ಸಂಘದ ಅಧ್ಯಕ್ಷರಾದ ನಿಶಾಂತ್ ಕಿಲೆಂಜೂರು, ಯಕ್ಷ ದೇಗುಲ ಹತ್ತು ಸಮಸ್ತರು 10ನೇ ತೋಕೂರು ಅಧ್ಯಕ್ಷರಾದ ಸುರೇಶ್ ಬಿ ದೇವಾಡಿಗ, ಬಿಲ್ಲವ ಸಂಘ ಹಳೆಯಂಗಡಿ ಗೌರವಾಧ್ಯಕ್ಷರಾದ ಗಣೇಶ್ ಜಿ ಬಂಗೇರ, ವಿಶ್ವಬ್ಯಾಂಕ್ ಕುಡಿಯುವ ನೀರು ಮತ್ತು ಪರಿಸರ ನೈರ್ಮಲ್ಯ ಸಮಿತಿ ಅಧ್ಯಕ್ಷರಾದ ದಿನಕರ್ ಸಾಲ್ಯಾನ್, ಶ್ರೀ ಕೋರ್ದಬ್ಬು ದೈವಸ್ಥಾನ ತೋಕೂರು ಇದರ ಗುರಿಕಾರರಾದ ಗೋಪಾಲಕೃಷ್ಣ ಸಾಲ್ಯಾನ್, ಸಂಜೀವ ಕರ್ಕೆರ ಹಾಗೂ ಫೇಮಸ್ ಯೂತ್ ಕ್ಲಬ್ಬಿನ ಅಧ್ಯಕ್ಷರಾದ ಭಾಸ್ಕರ್ ಅಮೀನ್ ತೋಕೂರು ಮತ್ತು ಮಹಿಳಾ ಅಧ್ಯಕ್ಷರಾದ ಶ್ರೀಮತಿ ಪ್ರೇಮಲತಾ ಯೋಗೀಶ್ ಉಪಸ್ಥಿತರಿದ್ದರು.

ಫೇಮಸ್ ಯೂತ್ ಕ್ಲಬ್ಬಿನ ಅಧ್ಯಕ್ಷರಾದ ಭಾಸ್ಕರ್ ಅಮೀನ್ ಸ್ವಾಗತಿಸಿ ಪ್ರಾಸ್ತಾವನೆಗೈದರು. ಸಂಸ್ಥೆಯ ಸದಸ್ಯರಾದ ಸಂಪತ್ ಜೆ ಶೆಟ್ಟಿ ತೋಕೂರು ಗುತ್ತು ಕಾರ್ಯಕ್ರಮನಿರೂಪಿಸಿದರು.
