ಕಾರವಾರ: 2017ರಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಹೊನ್ನಾವರದ ಪರೇಶ್ ಮೇಸ್ತಾ ಪ್ರಕರಣ ಬಳಿಕ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದಿದ್ದ ಕೋಮು ಸಂಘರ್ಷ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿದ್ದ ಪ್ರಕರಣವನ್ನು ರಾಜ್ಯ ಸರ್ಕಾರ ಹಿಂಪಡೆದಿದೆ.
ಪರೇಶ್ ಮೇಸ್ತಾ ಅವರನ್ನು ಹತ್ಯೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದ ಬಳಿಕ ಶಿರಸಿ ಸೇರಿ ಜಿಲ್ಲೆಯ ಹಲವೆಡೆ ಗಲಭೆ ನಡೆದಿತ್ತು. ಈ ಗಲಭೆ ಸಂಬಂಧಿಸಿ 122 ಜನರ ಮೇಲಿದ್ದ ಮೂರು ಪ್ರಕರಣ ಹಿಂಪಡೆದು ಸಿಎಂ ಬಸವರಾಜ ಬೊಮ್ಮಾಯಿ ಆದೇಶ ಮಾಡಿದ್ದಾರೆ.
ಈ ಹಿಂದೆ 26 ಪ್ರಕರಣವನ್ನು ರಾಜ್ಯ ಸರ್ಕಾರ ಹಿಂಪಡೆದಿತ್ತು. ಆದರೂ, 112 ಜನರ ಮೇಲಿನ ಮೂರು ಪ್ರಕರಣಗಳು ಬಾಕಿಯಾಗಿದ್ದವು. ಅಂದು ಶಾಸಕ ಹಾಗೂ ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಬಿಜೆಪಿ ಕಾರ್ಯಕರ್ತರು, ಬಜರಂಗದಳ ಕಾರ್ಯಕರ್ತರು ಸೇರಿದಂತೆ ಹಲವರ ಮೇಲೆ ಪ್ರಕರಣ ದಾಖಲಾಗಿತ್ತು. ಈಗ ರಾಜ್ಯ ಬಿಜೆಪಿ ಸರ್ಕಾರ 112 ಜನರ ಮೇಲಿನ ಪ್ರಕರಣಗಳನ್ನು ಹಿಂಪಡೆದು ಆದೇಶ ಹೊರಡಿಸಿದೆ.