Share this news

ಕಾರ್ಕಳ : ಕಾರ್ಕಳ ತಾಲೂಕು ಪಳ್ಳಿ ಗ್ರಾಮದ ಶಾಲೆ ಬಳಿ ವ್ಯಕ್ತಿಯೊಬ್ಬರು ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಶನಿವಾರ ನಡೆದಿದೆ.
ಪಳ್ಳಿ ನಿವಾಸಿ ಸಂತೋಷ್ (44 ವರ್ಷ )ಮೃತಪಟ್ಟವರು .
ಅವರು ಶನಿವಾರ ಬೆಳಿಗ್ಗೆ ಇಂದಿನಂತೆ ಕೆಲಸಕ್ಕೆ ಹೋಗಿ ಸಂಜೆ 6ಗಂಟೆಗೆ ಕೆಲಸ ಮುಗಿಸಿ ಮನೆಗೆ ಬಂದಿದ್ದರು .ರಾತ್ರಿ 9 ಗಂಟೆಗೆ ಊಟ ಮಾಡಿ ಶೌಚಾಲಯಕ್ಕೆಂದು ಹೋಗುತ್ತಿದ್ದ ವೇಳೆ ಮನೆಯ ಅಂಗಳದಲ್ಲಿ ಕುಸಿದು ಬಿದ್ದಿದ್ದರು. ಕೂಡಲೇ ಅವರನ್ನು ಚಿಕಿತ್ಸೆಗಾಗಿ ಕಾರ್ಕಳ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಅಲ್ಲಿ ಪರೀಕ್ಷಿಸಿದ ವೈದ್ಯರು ಸಂತೋಷ್ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ .
ಈ ಕುರಿತು ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *