Share this news
ಕೊಲ್ಕೊತಾ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ. ಅಪಘಾತದಲ್ಲಿ ಮಮತಾ ಅವರ ತಲೆಗೆ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.ಎದುರಿನಿAದ ಬರುತ್ತಿದ್ದ ವಾಹನಕ್ಕೆ ಡಿಕ್ಕಿಯಾಗುವುದನ್ನು ತಡೆಯಲು ಯತ್ನಿಸಿದ ಚಾಲಕ ತಕ್ಷಣ ಬ್ರೇಕ್ ಹಾಕಿದ್ದಾರೆ. ಇದರಿಂದ ಮಮತಾ ಅವರ ತಲೆಗೆ ಪೆಟ್ಟಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ತೃಣಮೂಲ ಕಾಂಗ್ರೆಸ್ ಮುಖ್ಯಸ್ಥರ ತಲೆಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಕೋಲ್ಕತ್ತಾ ಆಸ್ಪತ್ರೆಗೆ ದಾಖಲಿಸಲಾಗಿದೆ
ಕೆಟ್ಟ ಹವಾಮಾನದ ಕಾರಣ ಮಮತಾ ಹೆಲಿಕಾಪ್ಟರ್ ಟೇಕ್ ಆಫ್ ಆಗದ ಹಿನ್ನಲೆಯಲ್ಲಿ ಅವರು ಕಾರಿನಲ್ಲಿ ಹಿಂತಿರುಗಬೇಕಾಯಿತು. ಚಾಲಕನ ಪಕ್ಕದಲ್ಲಿ ಮುಂಭಾಗದಲ್ಲಿ ಕುಳಿತಿದ್ದ ಮಮತಾ ಬ್ಯಾನರ್ಜಿ ತಲೆ ವಿಂಡ್‌ಸ್ಕ್ರೀನ್‌ಗೆ ಬಡಿದ ಪರಿಣಾಮ ಗಾಯಗೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕೋಲ್ಕತ್ತಾದಲ್ಲಿ ವೈದ್ಯರು ಮಮತಾ ಅವರಿಗೆ ಚಿಕಿತ್ಸೆ ನೀಡಲಿದ್ದಾರೆ. ಆಡಳಿತಾತ್ಮಕ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಲು ಮುಖ್ಯಮಂತ್ರಿ ಕೋಲ್ಕತ್ತಾದಿಂದ 102 ಕಿಮೀ ದೂರದಲ್ಲಿರುವ ಪುರ್ಬಾ ಬರ್ಧಮಾನ್ ಗೆ ತೆರಳಿದ್ದರು.

ಉಡುಪಿ, ಮಂಗಳೂರಿನಲ್ಲಿ ಕೆಲಸ ಬೇಕೇ? ಸರ್ಕಾರಿ, ಅರೆಸರ್ಕಾರಿ, ಖಾಸಗಿ ಕಂಪೆನಿಗಳ ಉದ್ಯೋಗಾವಕಾಶಗಳ ಕುರಿತ ಸಂಪೂರ್ಣ ವಿವರಗಳಿಗೆ ಈ  ಲಿಂಕ್ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *