ಇಸ್ಲಾಮಾಬಾದ್: ಪಾಕಿಸ್ತಾನದ ವಿಚಾರಣಾ ನ್ಯಾಯಾಲಯವು ಶನಿವಾರ ಮಾಜಿ ಪ್ರಧಾನಿ ಇಮ್ರಾನ್ ಖಾನ್ಗೆ ಸರ್ಕಾರಿ ಉಡುಗೊರೆಗಳನ್ನು ಅಕ್ರಮವಾಗಿ ಮಾರಾಟ ಮಾಡಿದ್ದಕ್ಕಾಗಿ ಮೂರು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದೆ. ತೋಷಖಾನಾ ಭ್ರಷ್ಟಾಚಾರ ಪ್ರಕರಣ ಎಂದು ಕರೆಯಲ್ಪಡುವ ಈ ಪ್ರಕರಣದಲ್ಲಿ ಅವರನ್ನು ಐದು ವರ್ಷಗಳ ಕಾಲ ರಾಜಕೀಯದಿಂದ ಅನರ್ಹಗೊಳಿಸಲಾಗಿದೆ. ಈ ಪ್ರಕರಣದ ಶಿಕ್ಷೆಯು ನವೆಂಬರ್ ಆರಂಭದ ಮೊದಲು ನಡೆಯಲಿರುವ ರಾಷ್ಟ್ರೀಯ ಚುನಾವಣೆಗಳಲ್ಲಿ ಖಾನ್ ಭಾಗವಹಿಸುವ ಸಾಧ್ಯತೆಯನ್ನು ಕೊನೆಗೊಳಿಸಬಹುದು ಎಂದು ಕಾನೂನು ತಜ್ಞರು ಹೇಳಿದ್ದಾರೆ.
ನ್ಯಾಯಾಧೀಶ ಹುಮಾಯೂನ್ ದಿಲಾವರ್ ಅವರು, ಇಮ್ರಾನ್ ಖಾನ್ ಭ್ರಷ್ಟಾಚಾರದಲ್ಲಿ ಭಾಗಿಯಾಗಿರುವುದು ಸಾಬೀತಾಗಿದೆ ಎಂದು ಹೇಳಿರುವುದಾಗಿ ಪಾಕಿಸ್ತಾನ ಟಿವಿ ಹೇಳಿದೆ. ಖಾನ್ ವಿಚಾರಣೆಗೆ ನ್ಯಾಯಾಲಯದಲ್ಲಿ ಇರಲಿಲ್ಲ. ಇಮ್ರಾನ್ ಖಾನ್ ಅವರನ್ನು ಬಂಧಿಸುವAತೆ ನ್ಯಾಯಾಧೀಶರು ಆದೇಶಿಸಿದ್ದಾರೆ.
ನ್ಯಾಯಾಲಯವು ಪಿಟಿಐ ಮುಖ್ಯಸ್ಥರಿಗೆ 100,000 ಪಿಕೆಆರ್ ದಂಡ ವಿಧಿಸಿದೆ ಎಂದು ಡಾನ್ ವರದಿಯಾಗಿದೆ. ತೋಷಖಾನಾ ಉಡುಗೊರೆಗಳ ವಿವರಗಳನ್ನು ಮರೆಮಾಚಿದ್ದಕ್ಕಾಗಿ ಪಾಕಿಸ್ತಾನದ ಚುನಾವಣಾ ಆಯೋಗ (ಇಸಿಪಿ) ಅವರ ವಿರುದ್ಧ ಸಲ್ಲಿಸಿದ ಕ್ರಿಮಿನಲ್ ದೂರಿನ ಮೇರೆಗೆ ಖಾನ್ ಅವರನ್ನು ಮೇ 10 ರಂದು ದೋಷಾರೋಪಣೆ ಮಾಡಲಾಯಿತು.
ಶನಿವಾರ ನಡೆದ ವಿಚಾರಣೆಯಲ್ಲಿ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ದಿಲಾವರ್ ಅವರು ಪ್ರಕರಣದಲ್ಲಿ ಮಾಜಿ ಪ್ರಧಾನಿ ವಿರುದ್ಧದ ಆರೋಪ ಸಾಬೀತಾಗಿದೆ ಎಂದು ತೀರ್ಪು ನೀಡಿದರು.