ಮಹಾರಾಷ್ಟ್ರ: ಮುಂಬೈ-ಪುಣೆ ಹೆದ್ದಾರಿಯ ಲೋನಾವಾಲಾ ಬಳಿಯ ಮೇಲ್ಸೇತುವೆಯಲ್ಲಿ ತೈಲ ಟ್ಯಾಂಕರ್ ಪಲ್ಟಿಯಾಗಿದ್ದು, ಕ್ಷಣಮಾತ್ರದಲ್ಲೇ ಬೆಂಕಿ ಹೊತ್ತಿಕೊಂಡಿದ್ದು, ನಾಲ್ವರು ಸಜೀವ ದಹನವಾಗಿದ್ದಾರೆ.
ಇದರಿಂದಾಗಿ ಸೇತುವೆಯ ಕೆಳಗೂ ಅಪಘಾತಗಳು ಸಂಭವಿಸಿವೆ ಎನ್ನಲಾಗಿದೆ. ಈ ಅಗ್ನಿ ಅವಘಡದಿಂದಾಗಿ ರಕ್ಷಣಾ ಕಾರ್ಯಾಚರಣೆಯು ಭರದಿಂದ ನಡೆಯುತ್ತಿದ್ದು, ಸದ್ಯ ಲೋನಾವಾಲಾ ನಗರದಿಂದ ವಾಹನ ಸಂಚಾರವನ್ನು ಬದಲಿಸಲಾಗಿದೆ. ಎಕ್ಸ್ಪ್ರೆಸ್ವೇಯಲ್ಲಿ ಭಾರಿ ಟ್ರಾಫಿಕ್ ಜಾಮ್ ಆಗು ಹಿನ್ನಲೆಯಲ್ಲಿ ರಕ್ಷಣಾ ಕಾರ್ಯವನ್ನು ತ್ವರಿತವಾಗಿ ಪೂರ್ಣಗೊಳಿಸಲು ಪ್ರಯತ್ನಿಸಲಾಗುತ್ತಿದೆ.
ಪುಣೆ-ಮುಂಬೈ ಹೆದ್ದಾರಿಯ ಖಂಡಾಲಾ ಘಾಟ್ನಲ್ಲಿರುವ ಕುನೆ ಸೇತುವೆಯ ಮೇಲೆಕೆಮಿಕಲ್ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿಯಾಗಿ ಟ್ಯಾಂಕರ್ ಗೆ ಬೆಂಕಿ ತಗುಲಿ ಭಾರಿ ಅವಘಡ ಸಂಭವಿಸಿದೆ. ಈ ಅವಘಡದಿಂದ ಟ್ಯಾಂಕರ್ನಲ್ಲಿದ್ದ ಕೆಮಿಕಲ್ ರಸ್ತೆಗೆ ಹರಿದು ಟ್ರಾಫಿಕ್ ಜಾಮ್ ಉಂಟಾಗಿತ್ತು.