ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನಗರಸಭಾ ಸದಸ್ಯರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಶಿವರಾಮ ಸಫಲ್ಯ ಆತ್ಮಹತ್ಯೆ ಮಾಡಿಕೊಂಡಿರುವ ನಗರಸಭೆ ಸದಸ್ಯ. ವಾರ್ಡ್ ನಂಬರ್ 1ರ ಸದಸ್ಯರಾಗಿ ಇವರು ಆಯ್ಕೆಯಾಗಿದ್ದರು. ಪುತ್ತೂರಿನ ಉರಮಾಲ್ ನ ತಮ್ಮ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದರೆ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ತನಿಖೆ ಕೈಗೊಂಡಿದ್ದಾರೆ. ನಗರಸಭಾ ಅಧ್ಯಕ್ಷ ಜೀವಂಧರ್ ಸೇರಿದಂತೆ ಹಲವರು ಭೇಟಿ ನೀಡಿ ಸೂಕ್ತ ತನಿಖೆ ನಡೆಸುವಂತೆ ಒತ್ತಾಯಿಸಿದ್ದಾರೆ. ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.