ಪುತ್ತೂರು: ಸ್ನಾನಕ್ಕೆಂದು ಹೊಳೆಗೆ ಇಳಿದ ಸಂದರ್ಭದಲ್ಲಿಯೇ ಹೃದಯಾಘಾತ ಸಂಭವಿಸಿ, ನವವಿವಾಹಿತ ಯುವಕ ಮೃತಪಟ್ಟ ಘಟನೆ ಪುತ್ತೂರು ತಾಲೂಕಿನ ಇರ್ದೆ ಬೆಂದ್ರ್ ತೀರ್ಥ ಎಂಬಲ್ಲಿ ನಡೆದಿದೆ.
ಆರ್ಯಾಪು ಗ್ರಾಮದ ಒಳತ್ತಡ್ಕ ನಿವಾಸಿ ಜಿನ್ನಪ್ಪ ಗೌಡ ಎಂಬವರ ಪುತ್ರ ಸುಜಿತ್ (27) ಮೃತ ಯುವಕ.
ಮಂಗಳವಾರ ಮಧ್ಯಾಹ್ನ ಈ ದುರ್ಘಟನೆ ಸಂಭವಿಸಿದ್ದು,
ಸುಜಿತ್ ಇರ್ದೆ ಬೇಂದ್ರ್ ತೀರ್ಥ ಬಳಿ ಇರುವ ಸಂಬಂಧಿಕರ ಮನೆಗೆ ತೆರಳಿದ್ದು, ಈ ವೇಳೆ ಅಲ್ಲಿ ಸ್ನಾನ ಮಾಡಲೆಂದು ಹೊಳೆಯ ನೀರಿಗಿಳಿದಿದ್ದರು. ಅಲ್ಲಿಯೇ ಅವರಿಗೆ ಹೃದಯಾಘಾತ ಸಂಭವಿಸಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಅವರು ಪುತ್ತೂರಿನ ಬೊಳುವಾರು ಎಂಬಲ್ಲಿ ಗ್ಯಾರೇಜ್‌ನಲ್ಲಿ ಮೆಕ್ಯಾನಿಕ್ ಆಗಿ ಕೆಲಸ ನಿರ್ವಹಿಸುತ್ತಿದ್ದರು. 8 ತಿಂಗಳ ಹಿಂದೆ ವಿವಾಹಿತರಾಗಿದ್ದರು.
ಸಣ್ಣ ವಯಸ್ಸಿನಲ್ಲೇ ಹೃದಯಾಘಾತದಿಂದ ಮೃತಪಟ್ಟ ಸುಜಿತ್ ಕುಟುಂಬ ಶೋಕ ಸಾಗರದಲ್ಲಿ ಮುಳುಗಿದೆ