ಬೆಂಗಳೂರು: ರಾಜ್ಯದ ಪೊಲೀಸರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದ್ದು,ಕರ್ನಾಟಕ ಏಕೀಕರಣದ ಸುವರ್ಣ ಮಹೋತ್ಸವದ ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಘೋಷಣೆ ಮಾಡಿದ್ದು ರಾಜ್ಯದ ಎಲ್ಲಾ ಪೊಲೀಸ್ ಸಿಬ್ಬಂದಿಗೆ ಬೆಳ್ಳಿ ಪದಕ ನೀಡಲಾಗುವುದು. ಇದಲ್ಲದೇ ರಾಜ್ಯದ ಎಲ್ಲಾ ಪೊಲೀಸರ ವೈದ್ಯಕೀಯ ವೆಚ್ಚ 1000 ದಿಂದ 1500 ಕ್ಕೆ ಹೆಚ್ಚಿಸಲಾಗುವುದು ಅಂತ ತಿಳಿಸಿದ್ದಾರೆ.
ಇನ್ನೂ ಸೈಬರ್ ಕ್ರೆöÊಮ್(ಸೆನ್) ಠಾಣಾಧಿಕಾರಿಗಳ ಹುದ್ದೆಯನ್ನು ಎಸಿಪಿ ಮತ್ತು ಡಿಸಿಪಿ ಮಟ್ಟಕ್ಕೆ ಉನ್ನತೀಕರಣ ಮಾಡಲಾಗುವುದು ಎಂದು ಸಿಎಂ ತಿಳಿಸಿದರು. ಇದಲ್ಲದೇ ಬೆಂಗಳೂರು ನಗರದಲ್ಲಿ 8 ಅಡಿಷನಲ್ ಡಿಸಿಪಿ ಹುದ್ದೆಗಳನ್ನು ಹೆಚ್ಚುವರಿಯಾಗಿ ಸೃಜಿಸಲು ಕ್ರಮಕೈಗೊಳ್ಳಲಾಗುವುದು ಎಂದ ಸಿಎಂ, ಮಹಿಳೆ ಮತ್ತು ಮಕ್ಕಳ ಮೇಲಿನ ದೌರ್ಜನ್ಯದ ಪ್ರಕರಣಗಳಿಗೆ ಸಂಪೂರ್ಣ ಕಡಿವಾಣ ಹಾಕಿ. ಶಿಕ್ಷೆ ಪ್ರಮಾಣ ಹೆಚ್ಚಾಗಬೇಕು. ಇಲ್ಲದಿದ್ದರೆ ಡಿಸಿಪಿ ಗಳನ್ನೇ ಈ ವೈಫಲ್ಯಕ್ಕೆ ನೇರಹೊಣೆ ಮಾಡುವುದು ಅನಿವಾರ್ಯವಾಗುತ್ತದೆ ಎಂದು ಎಚ್ವರಿಸಿದರು. ಕರ್ನಾಟಕ ನಾಮಕರಣಗೊಂಡು, ಏಕೀಕರಣದ 50 ವರ್ಷದ ನೆನಪಿಗಾಗಿ ಸುವರ್ಣ ಪೊಲೀಸ್ ಭವನ ಕಟ್ಟಡ ನಿರ್ಮಾಣಕ್ಕೆ ಬಜೆಟ್ ನಲ್ಲಿ ಹಣ ನೀಡಲಾಗುವುದು. ಖಾಲಿ ಇರುವ ಪೊಲೀಸ್ ಹುದ್ದೆಗಳನ್ನೂ ಭರ್ತಿ ಮಾಡಲಾಗುವುದು ಎಂದು ಭರವಸೆ ನೀಡಿದರು.
ಉಡುಪಿ, ಮಂಗಳೂರಿನಲ್ಲಿ ಕೆಲಸ ಬೇಕೇ? ಸರ್ಕಾರಿ, ಅರೆಸರ್ಕಾರಿ, ಖಾಸಗಿ ಕಂಪೆನಿಗಳ ಉದ್ಯೋಗಾವಕಾಶಗಳ ಕುರಿತ ಸಂಪೂರ್ಣ ವಿವರಗಳಿಗೆ ಈ ಲಿಂಕ್ ಕ್ಲಿಕ್ ಮಾಡಿ