Share this news
ಬೆಂಗಳೂರು : ಸರ್ಕಾರ ನಿಗದಿಪಡಿಸಿದ ಕರ್ತವ್ಯಗಳನ್ನು ಹೊರತುಪಡಿಸಿ ಬೇರೆ ಕೆಲಸಗಳಿಗೆ ಪೌರಕಾರ್ಮಿಕರನ್ನು ನಿಯೋಜನೆ ಮಾಡುವಂತಿಲ್ಲವೆಂದು ಪೌರಾಡಳಿತ ನಿರ್ದೇಶನಾಲಯ ಇಲಾಖೆ ಸುತ್ತೋಲೆ ಹೊರಡಿಸಿದೆ. ಪೌರಕಾರ್ಮಿಕರನ್ನು ಬೇರೆ ಕೆಲಸಗಳಿಗೆ ನಿಯೋಜಿಸಲಾಗುತ್ತಿದೆ ಎಂಬ ದೂರು ಬಂದ ಹಿನ್ನೆಲೆಯಲ್ಲಿ ಪೌರಾಡಳಿತ ನಿರ್ದೇಶನಾಲಯ ಇಲಾಖೆ ಸುತ್ತೋಲೆಯಲ್ಲಿ ಈ ಮಹತ್ವದ ಸೂಚನೆ ನೀಡಿದೆ.

ಒಂದು ವೇಳೆ ಪೌರಕಾರ್ಮಿಕರಿಗೆ ನಿಗದಿಪಡಿಸಿದ ಕರ್ತವ್ಯಗಳನ್ನು ಹೊರತುಪಡಿಸಿ ಇತರೇ ಅನ್ಯ ಕೆಲಸ ಕಾರ್ಯಗಳಿಗೆ ನಿಯೋಜಿಸುವುದು ಕಂಡು ಬಂದಲ್ಲಿ ಅಥವಾ ನಿರ್ದೇಶನಾಲಯಕ್ಕೆ ದೂರು ಸ್ವೀಕೃತವಾದಲ್ಲಿ, ಅನ್ಯ ಕಾರ್ಯಗಳಿಗೆ ನಿಯೋಜಿಸಿದ ಸಂಬಂಧಿಸಿದ ಅಧಿಕಾರಿ/ಸಿಬ್ಬಂದಿಯನ್ನು ಮತ್ತು ಅವರ ಸೇವೆಯನ್ನು ಪಡೆಯುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದು ಇಲಾಖೆ ಎಚ್ಚರಿಸಿದೆ.
ರಾಜ್ಯದ ಎಲ್ಲಾ ಮಹಾನಗರಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಮತ್ತು ಅಧಿಸೂಚಿತ ಪ್ರದೇಶಗಳಲ್ಲಿ ಸೇವೆ ಸಲ್ಲಿಸುತ್ತಿರುವ ಪೌರಕಾರ್ಮಿಕರಿಗೆ ಸರ್ಕಾರ ನಿಗದಿಪಡಿಸಿದ ಕರ್ತವ್ಯಗಳ ಬದಲಾಗಿ ಇತರೆ ಅನ್ಯ ಕೆಲಸಕಾರ್ಯಗಳಿಗೆ ನಿಯೋಜಿಸುತ್ತಿರುವ ಕುರಿತು ನಿರ್ದೇಶನಾಲಯಕ್ಕೆ ದೂರುಗಳು ಬಂದಿವೆ.

ಹಾಗಾಗಿ ಇನ್ಮುಂದೆ ಸ್ಥಳೀಯ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಪೌರಕಾರ್ಮಿಕರಿಗೆ ಸರ್ಕಾರ ನಿಗದಿಪಡಿಸಿದ ಕರ್ತವ್ಯಗಳನ್ನು ಹೊರತುಪಡಿಸಿ, ಇತರೆ ಯಾವುದೇ ಅನ್ಯ ಕೆಲಸಗಳಿಗೆ ನಿಯೋಜಿಸದಂತೆ ಇಲಾಖೆ ಕಟ್ಟು ನಿಟ್ಟಿನ ಸೂಚನೆ ನೀಡಿದೆ.

ಉಡುಪಿ, ಮಂಗಳೂರಿನಲ್ಲಿ ಕೆಲಸ ಬೇಕೇ? ಸರ್ಕಾರಿ, ಅರೆಸರ್ಕಾರಿ, ಖಾಸಗಿ ಕಂಪೆನಿಗಳ ಉದ್ಯೋಗಾವಕಾಶಗಳ ಕುರಿತ ಸಂಪೂರ್ಣ ವಿವರಗಳಿಗೆ ಈ  ಲಿಂಕ್ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *