ಮಂಗಳೂರು : ಕರಾವಳಿಯ ಪ್ರಸಿದ್ಧ ‘ಆಭರಣ’ ಚಿನ್ನದ ಮಳಿಗೆಗಳ ಮೇಲೆ ಇಂದು ಬೆಳ್ಳಂಬೆಳಗ್ಗೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಕರಾವಳಿಯ ಅನೇಕ ಭಾಗಗಳಲ್ಲಿ ತನ್ನ ಶೋರೂಮ್ ಹೊಂದಿರುವ ಪ್ರಸಿದ್ಧ ಚಿನ್ನದ ಮಳಿಗೆ ಹೊರ ಜಿಲ್ಲೆಗಳಲ್ಲೂ ಕೂಡ ಶಾಖೆಗಳನ್ನು ಹೊಂದಿದೆ.
ಇಂದು ಮಂಗಳೂರಿನ ಕದ್ರಿ, ಉಡುಪಿ, ಕಾರ್ಕಳ, ಕುಂದಾಪುರ, ಪುತ್ತೂರು, ಪಡುಬಿದ್ರಿ, ಬ್ರಹ್ಮಾವರ ಸೇರಿದಂತೆ ಹಲವೆಡೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಏಕಕಾಲದಲ್ಲಿ ಆಭರಣದ ಅನೇಕ ಮಳಿಗೆಗಳಿಗೆ ದಾಳಿ ನಡೆಸಿರುವ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.
ಮಂಗಳೂರಿನ ಕದ್ರಿ ಬಳಿಯ ಶಿವಭಾಗ್ನ ಆಭರಣ ಜ್ಯುವೆಲ್ಲರಿಯಲ್ಲಿ ಐಟಿ ಅಧಿಕಾರಿಗಳು ಬೆಳಗ್ಗೆಯಿಂದ ತಪಾಸಣೆ ನಡೆಸುತ್ತಿದ್ದಾರೆ. ಐದಾರು ಜನರ ಐಟಿ ಅಧಿಕಾರಿಗಳ ತಂಡದಿಂದ ಜ್ಯುವೆಲ್ಲರಿಯಲ್ಲಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಬಿಲ್ಲಿಂಗ್ ವಿವರ, ಚಿನ್ನದ ಬೇರೆ ಬೇರೆ ದಾಖಲೆಗಳನ್ನು ಐಟಿ ತಂಡ ವಶಕ್ಕೆ ಪಡೆದಿದೆ ಎಂದು ಹೇಳಲಾಗಿದೆ. ಈ ಆಭರಣ ಸಂಸ್ಥೆ ರಾಜ್ಯದಲ್ಲಿ 14 ಹಾಗೂ ಗೋವಾದಲ್ಲಿ ಒಂದು ಮಳಿಗೆ ಹೊಂದಿದೆ.