Share this news

ಮಂಗಳೂರು: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ (NIA) ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಿತ್ತೂರಿನ ಕಮ್ಯುನಿಟಿ ಹಾಲ್​ ಅನ್ನು ತನ್ನ ಸುಪರ್ದಿಗೆ ತೆಗೆದುಕೊಂಡಿದೆ.

ಇಡುಕ್ಕಿ ಗ್ರಾಮದಲ್ಲಿರುವ ಮಿತ್ತೂರು ಫ್ರೀಡಂ ಕಮ್ಯುನಿಟಿ ಹಾಲ್ ಅನ್ನು ಉಗ್ರ ಕೃತ್ಯಕ್ಕೆ ಬಳಸಲಾಗುತ್ತಿತ್ತು ಎಂಬ ಆರೋಪವಿದೆ. ಹೀಗಾಗಿ ವಶಕ್ಕೆ ತೆಗೆದುಕೊಂಡಿರುವುದಾಗಿ ಎನ್​ಐಎ ಆದೇಶದಲ್ಲಿ ಉಲ್ಲೇಖಿಸಲಾಗಿದೆ. 20 ಗುಂಟೆ ಜಾಗ ಸಂಪೂರ್ಣ ವಶಕ್ಕೆ ಪಡೆಯಲಾಗಿದೆ ಎಂದು ಎನ್‌ಐಎ ಆದೇಶ ಪತ್ರ ರವಾನಿಸಿದೆ.  ಕಮ್ಯುನಿಟಿ ಹಾಲ್‌ಮಾಲೀಕ, ದಕ್ಷಿಣ ಕನ್ನಡ ಡಿಸಿ, ಎಸ್‌ಗೆ ಪತ್ರ ರವಾನೆ ಮಾಡಲಾಗಿದೆ.

 

Leave a Reply

Your email address will not be published. Required fields are marked *