ಮಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆ ಇನ್ನೇನು ಕೆಲ ತಿಂಗಳು ಬಾಕಿ ಇದೆ. ಪ್ರತಿಯೊಂದು ಪಕ್ಷಗಳು ಸಹ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿವೆ.
ಇತ್ತ ಎಸ್ಡಿಪಿಐ ಕೂಡ ಚುನಾವಣೆಗೆ ತಯಾರಿ ನಡೆಸಿದ್ದು, ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಜೈಲುಪಾಲಾಗಿರುವ ಶಾಫಿ ಬೆಳ್ಳಾರೆ ಗೆ ಎಸ್ಡಿಪಿಐ ಮುಂದಿನ ವಿಧಾನಸಭಾ ಚುನಾವಣೆಗೆ ಪುತ್ತೂರಿನಿಂದ ಟಿಕೆಟ್ ಘೋಷಿಸಿದೆ.
ಪುತ್ತೂರು ವಿಧಾನ ಸಭಾ ಕ್ಷೇತ್ರದಿಂದ ಶಾಫಿ ಬೆಳ್ಳಾರೆ ಅವರನ್ನು ಕಣಕ್ಕಿಳಿಸುವುದಾಗಿ ಎಸ್ಡಿಪಿಐ ಕಾರ್ಯಕರ್ತರ ಸಮಾವೇಶ ದಲ್ಲಿ ಘೋಷಣೆ ಮಾಡಲಾಗಿದೆ. ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಖಾನ್ ಆಗಿದ್ದು, ಶಾಫಿ ಬೆಳ್ಳಾರೆ ಎಸ್ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಆಗಿದ್ದಾರೆ.
ಸದ್ಯ ಪ್ರವೀಣ್ ನೆಟ್ಟಾರ್ ಪ್ರಕರಣದಲ್ಲಿ NIA ಬಂಧನದಲ್ಲಿರುವ ಶಾಫಿ ಬೆಳ್ಳಾರೆ, ಜೈಲಿನಿಂದಲೇ ಚುನಾವಣೆಗೆ ಸ್ಪರ್ಧಿಸಲಿದ್ದಾರೆ. ಆರೋಪಿ ಶಾಫಿ ಬೆಳ್ಳಾರೆಯನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸುವ ಮೂಲಕ SDPI ಭಾರಿ ವಿವಾದ ಸೃಷ್ಟಿಸಿದೆ.