ಬೆಂಗಳೂರು: 2024-25ನೇ ಸಾಲಿನ ರಾಜ್ಯ ಬಜೆಟ್ ಅನ್ನು ಈ ಬಾರಿ ಅವಧಿಗೂ ಮೊದಲೇ ಮಂಡಿಸುವುದಕ್ಮೆ ರಾಜ್ಯ ಸರ್ಕಾರ ಸಿದ್ದತೆ ನಡೆಸಿದೆ.
ಮುಂದಿನ ಫೆಬ್ರವರಿ ತಿಂಗಳಲ್ಲೇ ರಾಜ್ಯ ಬಜೆಟ್ ಮಂಡನೆ ಮಾಡುವುದಾಗಿ ಸಿಎಂ ಸಿದ್ಧರಾಮಯ್ಯ ಘೋಷಿಸಿದ್ದಾರೆ.
ಈ ಕುರಿತು ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾರ್ಚ್ ಮೊದಲ ವಾರದೊಳಗೆ ಚುನಾವಣಾ ನೀತಿ ಸಂಹಿತೆ ಘೋಷಣೆಯಾಗುವುದರಿಂದ ಫೆಬ್ರವರಿ ತಿಂಗಳಲ್ಲಿಯೇ ಬಜೆಟ್ ಮಂಡಿಸಲಾಗುವುದು ಎಂದರು.
ರೈತರರಿಗೆ ಪರಿಹಾರ ನೀಡಿಲ್ಲವೆಂದು ಪ್ರತಿಭಟನೆ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ರೈತರಿಗೆ 2 ಸಾವಿರ ರೂ.ಗಳ ತಾತ್ಕಾಲಿಕ ಪರಿಹಾರವನ್ನು ನೀಡುತ್ತಿದ್ದು ಕೇಂದ್ರ ಸರ್ಕಾರದಿಂದ ಪರಿಹಾರ ಬಂದ ಬಳಿಕ ಎನ್.ಡಿ.ಆರ್.ಎಫ್ ನಿಯಮಾವಳಿ ಗಳ ಪ್ರಕಾರ ಪರಿಹಾರ ನೀಡಲಾಗುವುದು ಎಂದರು.
ಅನಂತಕುಮಾರ್ ಹೆಗಡೆಯವರು ಏಕವಚನದಲ್ಲಿ ಮಾತನಾಡುವುದನ್ನು ಕಲಿಸಿದ್ದೇ ಸಿದ್ದರಾಮಯ್ಯ ಅವರು ಎಂದು ಸಮರ್ಥಿಸಿಕೊಂಡಿದ್ದಾರೆ ಎಂಬ ಬಗ್ಗೆ ಪ್ರತಿಕ್ರಿಯೆ ನೀಡಿ ಅವರು ರಾಜಕೀಯವಾಗಿ ಆರೋಪ ಮಾಡುತ್ತಾರೆ. ಅನಂತ ಕುಮಾರ್ ಹೆಗಡೆ ಅವರು ಇವತ್ತಿನವರೆಗೆ ನಾಪತ್ತೆಯಾಗಿದ್ದರು. ಚುನಾವಣೆ ಹತ್ತಿರ ಬಂದಂತೆ ಕಾಣಿಸಿಕೊಂಡು ಹೇಳಿಕೆ ನೀಡಿದ್ದಾರೆ. ಸಂಸದರಾಗಿ ಮಾಜಿ ಮಂತ್ರಿಯಾಗಿ ಕ್ಷೇತ್ರ ಕ್ಕೆ ಏನಾದರೂ ಮಾಡಿದ್ದಾರೆಯೇ ಎಂದು ಪ್ರಶ್ನಿಸಿದ ಮುಖ್ಯಮಂತ್ರಿಗಳು ಇಂದಿನವರೆಗೆ ಬಡವರ ಸಮಸ್ಯೆ ಕೇಳಿದ್ದಾರೆಯೇ? ಸಂಸ್ಕೃತಿ ಎಂದರೆ ಮನುಷ್ಯತ್ವ. ಮೊದಲು ಮನುಷ್ಯ ತ್ವ ಇರಬೇಕು ಎಂದರು.
ಉಡುಪಿ, ಮಂಗಳೂರಿನಲ್ಲಿ ಕೆಲಸ ಬೇಕೇ? ಸರ್ಕಾರಿ, ಅರೆಸರ್ಕಾರಿ, ಖಾಸಗಿ ಕಂಪೆನಿಗಳ ಉದ್ಯೋಗಾವಕಾಶಗಳ ಕುರಿತ ಸಂಪೂರ್ಣ ವಿವರಗಳಿಗೆ ಈ ಲಿಂಕ್ ಕ್ಲಿಕ್ ಮಾಡಿ