ಕಾರ್ಕಳ : ಗ್ರಾಮ ಪಂಚಾಯತ್ ನೌಕರರ ಸಿ ಮತ್ತು ಡಿ ದರ್ಜೆ ಸ್ಥಾನಮಾನಕ್ಕಾಗಿ ಹಾಗೂ ಇತರ ಮೂಲಭೂತ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಬೆಂಗಳೂರು ಚಲೋ- 2023 ರಾಜ್ಯ ಮಟ್ಟದ ಅನಿರ್ದಿಷ್ಟಾವಧಿ ಬೃಹತ್ ಪ್ರತಿಭಟನೆಯು ಫೆ.6 ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆಯಲಿದೆ.
ಈ ಪ್ರತಿಭಟನೆಗೆ ಬೆಂಬಲ ನೀಡುವಂತೆ ಕೋರಿ ಕಾರ್ಕಳ ತಾಲೂಕು ಕಾರ್ಯ ನಿರ್ವಹಣಾಧಿಕಾರಿಯವರಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ್ ನೌಕರರ ಶ್ರೇಯೋಭಿವೃದ್ಧಿ ಸಂಘ ಆರ್. ಡಿ .ಪಿ .ಆರ್ ಕಾರ್ಕಳ ಸಮಿತಿಯ ಅಧ್ಯಕ್ಷೆ ನಳಿನಿ ರೆಂಜಾಳ, ಉಡುಪಿ ಜಿಲ್ಲಾ ಉಪಾಧ್ಯಕ್ಷ ಹೇಮಚಂದ್ರ ನಂದಳಿಕೆ ಹಾಗೂ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು