ಕಾರ್ಕಳ :ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಜಿಲ್ಲಾ ಮಲೆಕುಡಿಯ ಸಂಘ ಉಡುಪಿ ಹಾಗೂ ಗ್ರಾಮ ಪಂಚಾಯಿತಿ ಮಾಳ ಇವರ ಜಂಟಿ ಸಹಯೋಗದಲ್ಲಿ ಉಡುಪಿ ಜಿಲ್ಲಾ ಮಲೆಕುಡಿಯ ಸಂಘದ ನೂತನ ಸಭಾಭವನದ ಉದ್ಘಾಟನಾ ಸಮಾರಂಭವು ಫೆಬ್ರವರಿ 26ರಂದು ಕಾರ್ಕಳ ತಾಲೂಕು ಮಾಳ ಪೇರಡ್ಕದಲ್ಲಿ ನಡೆಯಲಿದೆ.
ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಸಚಿವ ಬಿ. ಶ್ರೀರಾಮುಲು ಕಾರ್ಯಕ್ರಮ ಉದ್ಘಾಟಿಸಲಿದ್ದು, ಇಂಧನ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ ಸುನಿಲ್ ಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ರಾಜ್ಯಸಭೆ ಸದಸ್ಯರು ಹಾಗೂ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ, ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ, ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ, ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ, ಸಂಸದ ಬಿ. ವೈ ರಾಘವೇಂದ್ರ, ಶಾಸಕರಾದ ಹಾಲಾಡಿ ಶ್ರೀನಿವಾಸ್ ಶೆಟ್ಟಿ, ಕೆ.ರಘುಪತಿ ಭಟ್, ಲಾಲಾಜಿ ಆರ್ ಮೆಂಡನ್ ಮತ್ತು ಬಿ.ಎಂ ಸುಕುಮಾರ್ ಶೆಟ್ಟಿ, ವಿಧಾನ ಪರಿಷತ್ ಶಾಸಕರಾದ ಆಯನೂರು ಮಂಜುನಾಥ, ಎಸ್.ಎಲ್. ಭೋಜೆಗೌಡ, ಡಾ. ತೇಜಸ್ವಿನಿ ಗೌಡ, ಮಂಜುನಾಥ ಭಂಡಾರಿ, ರಾಜ್ಯ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಣಿರಾಜ್ ಶೆಟ್ಟಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ತಿಮ್ಮಪ್ಪ ಶೆಟ್ಟಿ ಚಣಿಲ, ಮಾಳ ಗ್ರಾಮ ಪಂಚಾಯತ್ ಅಧ್ಯಕ್ಷೆ ರಕ್ಷಿತಾ ಶೆಟ್ಟಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮನೋಜ್ ಜೈನ್, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ನಿರ್ದೇಶಕ ಪಿ.ಎಸ್ ಕಾಂತರಾಜ್, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್, ಜಿಲ್ಲಾ ಪೊಲೀಸ್ ಅಧೀಕ್ಷಕ ಹಾಕೆ ಅಕ್ಷಯ್ ಮಚ್ಚಿಂದ್ರ,ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಅರುಣ್ ಕುಮಾರ್,ಐಟಿಡಿಪಿ ಯೋಜನಾ ಸಮನ್ವಯಾಧಿಕಾರಿ ದೂದ್‌ಪೀರ್,ಪಿ ಭಾಗವಹಿಸಲಿದ್ದಾರೆ ಎಂದು ರಾಜ್ಯ ಮಲೆಕುಡಿಯ ಸಂಘದ ಅಧ್ಯಕ್ಷ ಶ್ರೀಧರ ಗೌಡ, ಹಾಗೂ ಉಡುಪಿ ಜಿಲ್ಲಾ ಮಲೆಕುಡಿಯ ಸಂಘದ ಅಧ್ಯಕ್ಷ ಗಂಗಾಧರ ಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.