ನವದಹೆಲಿ: ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿ ವಿಚಾರವಾಗಿ ದೆಹಲಿಯಲ್ಲಿ ನಡೆದ ಸ್ಕ್ರೀನಿಂಗ್ ಕಮಿಟಿಯ ಸಭೆಯಲ್ಲಿ ಪಟ್ಟಿ ಫೈನಲ್ ಸಾಧ್ಯವಾಗಿಲ್ಲ. ಹಲವು ಕ್ಷೇತ್ರಗಳಲ್ಲಿ ಇಬ್ಬರು, ಮೂವರು ಆಕಾಂಕ್ಷಿಗಳು ಇರುವ ಕಾರಣ, ಇಂದು ಮತ್ತೆ ಸ್ಕ್ರೀನಿಂಗ್ ಕಮಿಟಿ ಸಭೆ ನಡೆಯಲಿದೆ. ಈ ಬಳಿಕವೇ 2ನೇ ಪಟ್ಟಿ ರಿಲೀಸ್ ಮಾಡುವ ಸಾಧ್ಯತೆ ಇದೆ.
ರಾಜ್ಯ ವಿಧಾನಸಭಾ ಚುನಾವಣೆಗೆಗಾಗಿ ಮಂಗಳವಾರ ಕಾಂಗ್ರೆಸ್ ಪಕ್ಷದ ನಾಯಕರ ನೇತೃತ್ವದಲ್ಲಿ ಕೈ ಅಭ್ಯರ್ಥಿಗಳ 2ನೇ ಪಟ್ಟಿ ಫೈನಲ್ ಮಾಡುವ ಸಂಬಂಧ ಮಹತ್ವದ ಸ್ಕ್ರೀನಿಂಗ್ ಕಮಿಟಿ ಸಭೆ ನಡೆಯಿತು. ಈ ಸಭೆಯಲ್ಲಿ ಚಿತ್ರದುರ್ಗ ಮೊಳಕಾಲ್ಮೂರು ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಫೈನಲ್ ಮಾಡಲು ಸಾಧ್ಯವಾಗಿಲ್ಲ ಎನ್ನಲಾಗುತ್ತಿದೆ.
ಈ ಹಿನ್ನಲೆಯಲ್ಲಿ ಇಂದು 4 ಗಂಟೆಗೆ ಮತ್ತೆ ಕಾಂಗ್ರೆಸ್ ನಾಯಕ ನೇತೃತ್ವದಲ್ಲಿ ಮತ್ತೊಂದು ಸುತ್ತಿನಲ್ಲಿ ರಾಜ್ಯ ವಿಧಾನಸಭಾ ಚುನಾವಣೆಗೆಗಾಗಿ ಮಂಗಳವಾರ ಕಾಂಗ್ರೆಸ್ ಪಕ್ಷದ ನಾಯಕರ ನೇತೃತ್ವಕಾಂಗ್ರೆಸ್ ಸ್ಕ್ರೀನಿಂಗ್ ಕಮಿಟಿಯ ಸಭೆ ನಡೆಯಲಿದೆ. ರಾಜ್ಯ ನಾಯಕರು ಸೇರಿದಂತೆ ಕೇಂದ್ರ ನಾಯಕರ ನೇತೃತ್ವದಲ್ಲಿ ನಡೆಯಲಿರುವಂತ ನಾಳಿನ ಸ್ಕ್ರೀನಿಂಗ್ ಕಮಿಟಿ ಸಭೆಯ ಬಳಿಕ ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿ ಫೈನಲ್ ಆಗಲಿದೆ ಎನ್ನಲಾಗುತ್ತಿದೆ.
ಕಾಂಗ್ರೆಸ್ ಪಕ್ಷದಿಂದ ಇಂದು ನಡೆಯುತ್ತಿರುವ ಸ್ಕ್ರೀನಿಂಗ್ ಕಮಿಟಿ ಸಭೆಯ ಬಳಿಕ 2ನೇ ಪಟ್ಟಿಯಲ್ಲಿ 40 ಅಭ್ಯರ್ಥಿಗಳ ಹೆಸರನ್ನು ಘೋಷಿಸುವ ಸಾಧ್ಯತೆ ಇದೆ. ಇದೇ ವಿಷಯವನ್ನು ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲ ಕೂಡ ಹೇಳಿದ್ದರು. ಆ ಬಗ್ಗೆ ನಾಳಿನವರೆಗೆ ಕಾದು ನೋಡಬೇಕಿದೆ.