Share this news

ತಮಿಳುನಾಡು: ಬಂಗಾಳ ಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತವಾಗಿರುವ ಹಿನ್ನೆಲೆ,  ಭಾರೀ ಮಳೆ, ಚಳಿ, ಮಂಜು ಕವಿದ ವಾತಾವರಣ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ  ಮುನ್ಸೂಚನೆ ನೀಡಿದೆ.

ನೈಋತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಫೆಬ್ರವರಿ 1 ಮತ್ತು 2 ರಂದು ದಕ್ಷಿಣ ತಮಿಳುನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ  ಮುನ್ಸೂಚನೆ ನೀಡಿದೆ.

ನಿರಂತರ ಭಾರೀ ಮಳೆಯ ಹಿನ್ನೆಲೆಯಲ್ಲಿ ನಾಗಪಟ್ಟಣಂ ಮತ್ತು ತಿರುವರೂರು ಜಿಲ್ಲೆಗಳಲ್ಲಿ ಇಂದು ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

 

 

Leave a Reply

Your email address will not be published. Required fields are marked *