Share this news

ಬಂಟ್ವಾಳ:ವಿಧಾನಸಭೆ ಸ್ಪೀಕರ್ ಯು‌.ಟಿ ಖಾದರ್ ದೇವಸ್ಥಾನಗಳ ಬ್ರಹ್ಮಕಲಶ, ನಾಗಮಂಡಲ, ನೇಮೋತ್ಸವಗಳಲ್ಲಿ ಭಾಗವಹಿಸಿ ಸೌಹಾರ್ದತೆ ಮೆರೆಯುವ ಮೂಲಕ ಮಾದರಿಯಾಗಿದ್ದಾರೆ.ಆದರೆ ಇವರ ಇದೇ ನಡೆಗೆ ಮುಸ್ಲಿಂ ಧಾರ್ಮಿಕ ಮುಖಂಡನೋರ್ವನ ಆಕ್ರೋಶಕ್ಕೆ ಕಾರಣವಾಗಿದೆ. ಧಾರ್ಮಿಕ ಕಾರ್ಯಕ್ರಮಗಳಿಗೂ ದೈವಗಳ ಹರಕೆಕೋಲ ನೆರವೇರಿಸಿದ ವಿಧಾನ ಸಭಾಧ್ಯಕ್ಷ ಯು ಟಿ ಖಾದರ್‌ ವಿರುದ್ಧ ಮುಸ್ಲಿಂ ಧಾರ್ಮಿಕ ಮುಖಂಡ ಸಾಲೆತ್ತೂರು ಫೈಝಿ ಎಂಬಾತ ಫೇಸ್ ಬುಕ್ ನಲ್ಲಿ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾನೆ,ಆದರೆ ಖಾದರ್ ಅವರು ಈ ಕುರಿತು ಪ್ರತಿಕ್ರಿಯಿಸಿದ್ದು, ಫೈಝಿಗೆ ತಿರುಗೇಟು ನೀಡಿದ್ದಾರೆ.

ಬಂಟ್ವಾಳ ತಾಲೂಕಿನ ಶ್ರೀ ಕ್ಷೇತ್ರ ಪಣೋಲಿಬೈಲ್‌ನಲ್ಲಿ ನಡೆದಿದ್ದ ಹರಕೆ ಕೋಲದಲ್ಲಿ ಯುಟಿ ಖಾದರ್ ಭಾಗಿಯಾಗಿದ್ದರು. ಈ ವೇಳೆ ಕಾರ್ಣಿಕ ದೈವಗಳಾದ ಕಲ್ಲುರ್ಟಿ ಕಲ್ಕುಡ ದೈವಗಳ ಆಶೀರ್ವಾದ ಪಡೆದು ಹರಕೆ ಕೋಲ ನೆರವೇರಿಸಿದ್ದರು. ಇದು ಮುಸ್ಲಿಂ ಧಾರ್ಮಿಕ ಮುಖಂಡನ ಕೆಂಗಣ್ಣಿಗೆ ಗುರಿಯಾಗಿದೆ. ಒರ್ವ ಮುಸ್ಲಿಮನಾಗಿ ದೈವಗಳ ಹರಕೆ ಕೋಲ ನೇರವೇರಿಸಿದ್ದಕ್ಕೆ ಆಕ್ಷೇಪಿಸಿದ ಫೈಝಿ, ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ಷೇಪ ವ್ಯಕ್ತಪಡಿಸಿ ಪೋಸ್ಟ್ ಮಾಡಿದ್ದಾನೆ.ಈತನ ಪೋಸ್ಟ್ ಗೆ ಮುಸ್ಲಿಂ ಸಮುದಾಯದಲ್ಲಿ
ಇದಕ್ಕೆ ಪರ-ವಿರೋಧ ಅಭಿಪ್ರಾಯಗಳು ಬಂದಿವೆ.

ಪೋಸ್ಟ್‌ನಲ್ಲಿ ಏನಿದೆ?

ಕೊರಗಜ್ಜನ ಭಕ್ತ ಯು. ಟಿ. ಕಾದರ್ ನನ್ನು ಮುಸ್ಲಿಮರು ಬರೀ ರಾಜಕಾರಣಿಯಾಗಿ ಕಂಡರೆ ಸಾಕು. ಧಾರ್ಮಿಕ ಮುಂದಾಳುವಾಗಿ ಕಾಣುವುದು, ಉಲಮಾ, ಸಾತ್ವಿಕರು ತುಂಬಿದ ಧಾರ್ಮಿಕ ವೇದಿಕೆಗೆ ಮುಸ್ಲಿಮ್ ನಾಯಕನಾಗಿ ಹತ್ತಿಸುವುದು ತರವಲ್ಲ.‌ ಅದು ಅವನ ಭೂತಾರಾಧನೆಗೆ ನಾವು ಕೊಡುವ ಅಂಗೀಕಾರವಾದೀತು.
ಖಾದರ್, ಕೊರಗಜ್ಜನಿಗೂ ಕಲ್ಲುರ್ಟಿ, ಪಂಜುರ್ಲಿಗೋ ಆರಾಧಿಸಲಿ, ಪ್ರಸಾದ ಪಡೆದು ತಲೆಗೆ ಮೆತ್ತಿಕೊಂಡು ನರಕಕ್ಕೆ ಹೋಗಲಿ ಅದು ಆತನ ವೈಯಕ್ತಿಕ ಸ್ವಾತಂತ್ರ್ಯ. ಅದು ಭಾರತದಲ್ಲಿ ಎಲ್ಲರಿಗೂ ಇರುವ ಸಾಂವಿಧಾನಿಕ ಸ್ವಾತಂತ್ರ್ಯ. ಅದನ್ನು ತಡೆಯುವ ಹಕ್ಕು ನಮಗಿಲ್ಲ. ಆದರೆ ಧಾರ್ಮಿಕ ನಾಯಕನಾಗಿ ನಾವು ಅಂಗೀಕರಿಸುವುದು ಮಾತ್ರ ಆತನ ಭೂತಾರಾಧನೆಯನ್ನು ನಾವು ಒಪ್ಪಿಕೊಂಡಂತಾಗುತ್ತದೆ. ಉಲೇಮಾಗಳು ಅವನಿಗೆ ಗೌರವ ಕೊಡುವುದು ಮುಸ್ಲಿಮ್ ಸಮುದಾಯಕ್ಕೆ ಕೆಟ್ಟ ಸಂದೇಶವಾಗಿ ಪರಿಣಮಿಸುತ್ತದೆ ಎಂದು ಸಾಲೆತ್ತೂರು ಫೈಝಿ ಬರೆದುಕೊಂಡಿದ್ದಾನೆ

ಉಡುಪಿ, ಮಂಗಳೂರಿನಲ್ಲಿ ಕೆಲಸ ಬೇಕೇ? ಸರ್ಕಾರಿ, ಅರೆಸರ್ಕಾರಿ, ಖಾಸಗಿ ಕಂಪೆನಿಗಳ ಉದ್ಯೋಗಾವಕಾಶಗಳ ಕುರಿತ ಸಂಪೂರ್ಣ ವಿವರಗಳಿಗೆ ಈ  ಲಿಂಕ್ ಕ್ಲಿಕ್ ಮಾಡಿ

 

 

 

 

 

 
 

 

 
 

Leave a Reply

Your email address will not be published. Required fields are marked *