ಕಾರ್ಕಳ : ಕಾರ್ಕಳ ತಾಲೂಕಿನ ಬಜಗೋಳಿ ಕಡಾರಿ ಎಂಬಲ್ಲಿ ಆಸ್ತಿ ವಿಚಾರವಾಗಿ ಮನೆಗೆ ನುಗ್ಗಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿರುವ ಘಟನೆ ಸೋಮವಾರ ನಡೆದಿದೆ.
ಸಂದೀಪ್ ಕುಮಾರ್, ಪ್ರಶಾಂತ್ ಕುಮಾರ್, ಸುಜಾತ, ಸಂದೀಪ್, ಸ್ಮಿತಾ ನಾಯರ್ ಎಂಬವರು ಕಡಾರಿಯ ಕೆ ಲಕ್ಷ್ಮಿ ಟೀಚರ್ ಎಂಬವರ ಮನೆಗೆ ಮಾರಕಾಸ್ತ್ರಗಳೊಂದಿಗೆ ಅಕ್ರಮ ಪ್ರವೇಶ ಮಾಡಿ ಲಕ್ಷ್ಮೀ ಅವರಲ್ಲಿ ಆಸ್ತಿಯಲ್ಲಿ ಪಾಲು ನೀಡಬೇಕಾಗಿ ಕೇಳಿದಾಗ ಲಕ್ಷ್ಮೀ ಅವರು ಆಸ್ತಿಯಲ್ಲಿ ಪಾಲು ಕೊಡಲು ನಿರಾಕರಿಸಿದಾಗ ಆರೋಪಿಗಳು ಮಾರಕಾಸ್ತ್ರಗಳಿಂದ ಲಕ್ಷ್ಮಿ ಟೀಚರ್, ಅವರ ಮಗಳು ಆರತಿ ಹಾಗೂ ಅಳಿಯ ಅಶೋಕ್ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದರೆ. ಗಾಯಾಳುಗಳು ಚಿಕಿತ್ಸೆಗಾಗಿ ಕಾರ್ಕಳ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದು , ಈ ಕುರಿತು ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.