ಬೆಂಗಳೂರು: ಈ ಬಾರಿ ಮಳೆ ಕೊರತೆಯಿಂದ ಬೆಳೆಗಳು ಕೈಕೊಟ್ಟಿದ್ದು, ಇದರಿಂದ ರೈತರು ಕಂಗಾಲಾಗಿದ್ದಾರೆ. ಮಳೆ ಬೆಳೆ ಇಲ್ಲದೇ ರಾಜ್ಯದೆಲ್ಲೆಡೆ ತೀವ್ರ ಬರ ಆವರಿಸಿದೆ. ಇದೀಗ ರಾಜ್ಯ ಸರ್ಕಾರ ಬರ ಪರಿಹಾರ ಹಣ ಬಿಡುಗಡೆ ಮಾಡಿದೆ.. 31 ಜಿಲ್ಲೆಗಳ ಬೆಳೆ ನಷ್ಟ ಆಧರಿಸಿ ಎಸ್.ಡಿ.ಆರ್.ಎಫ್ ಅಡಿಯಲ್ಲಿ ಇಂದು (ನವೆಂಬರ್ 03) 324 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿದೆ.
ಮುಂಗಾರು ವೈಫಲ್ಯದಿಂದ ರೈತರಿಗೆ ಬೆಳೆ ಬೆಳೆಯಲು ಸಾಧ್ಯವಾಗಿಲ್ಲ. ಕೆಲ ರೈತರು ಬೆಳೆದಿದ್ದರೂ ನೀರಿನ ಕೊರತೆಯಿಂದ ಬೆಳೆ ಒಣಗಿ ಹೋಗಿವೆ. ಇದರಿಂದ ರೈತರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದರಿಂದ ಹಲವು ರೈತ ಸಂಘಟನೆಗಳು ಬೆಳೆ ಪರಿಹಾರ ಘೋಷಣೆ ಮಾಡಿಬೇಕೆಂದು ಆಗ್ರಹಿಸಿದ್ದವು. ಅದರಂತೆ ಇದೀಗ ರಾಜ್ಯ ಸರ್ಕಾರ ಬೆಳೆ ಪರಿಹಾರಕ್ಕೆ ಅನುದಾನ ರಿಲೀಸ್ ಮಾಡಿದ್ದು, ಬೆಳೆ ಕಳೆದುಕೊಂಡು ಕಂಗಾಲಾಗಿರುವ ಅರ್ಹ ರೈತರಿಗೆ ಸರ್ಕಾರದ ಈ ಬರ ಪರಿಹಾರ ಸಿಗುವಂತಾಗಲಿ.