ಕಾರ್ಕಳ: ಕಳೆದ ಬಾರಿಯಂತೆ ಈ ಬಾರಿಯ ಚುನಾವಣೆಯಲ್ಲಿಯೂ ಮಹಿಳಾ ಸಿಬ್ಬಂದಿಗಳನ್ನೊಳಗೊAಡ ಸಖಿ ಮತಗಟ್ಟೆಗಳು ಮತದಾರರನ್ನು ಸ್ವಾಗತಿಸಲು ಸಜ್ಜಾಗಿವೆ. ಈ ಬಾರಿ ತಾಲೂಕಿನಲ್ಲಿ ಒಟ್ಟು 5 ಸಖಿ ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, ಒಂದೊAದು ಮತಗಟ್ಟೆಗಳಿಗೆ ಪಿಆರ್‌ಓ,ಎಪಿಆರ್‌ಓ ಸೇರಿ ಒಟ್ಟು 7 ಜನ ಸಿಬ್ಬಂದಿಗಳಿದ್ದು ಈ ಬೂತ್ ನಲ್ಲಿ ಕಾರ್ಯನಿರ್ವಹಿಸುವವರು ಎಲ್ಲಾ ಮಹಿಳೆಯರೇ ಆಗಿರುವುದು ವಿಶೇಷ.
ಕಾರ್ಕಳ ಪುರಸಭಾ ವ್ಯಾಪ್ತಿಯಲ್ಲಿ ಕಾಬೆಟ್ಟು ಪ್ರೌಢ ಹಾಗೂ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಮೂರು ಹಾಗೂ ಹೆಬ್ರಿ ಹಾಗೂ ಮುದ್ರಾಡಿ ಪ್ರಾಥಮಿಕ ಶಾಲೆಗಳಲ್ಲಿ ತಲಾ ಒಂದು ಮತಗೆಟ್ಟೆ ಸೇರಿ ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 5 ಮತಗಟ್ಟೆ ಸ್ಥಾಪಿಸಲಾಗಿದೆ. ಈಗಾಗಲೇ ಸಖಿ ಮತಗಟ್ಟೆಗಳನ್ನು ವಿಶೇಷವಾಗಿ ಬಲೂನು ಹಾಗೂ ಹೂವುಗಳಿಂದ ಅಲಂಕರಿಸಲಾಗಿದ್ದು ಮತದಾರರ ಸ್ವಾಗತಕ್ಕೆ ಸಜ್ಜಾಗಿ ನಿಂತಿವೆ. ಪ್ರಮುಖವಾಗಿ ಸಖಿ ಮತಗಟ್ಟೆಗಳಲ್ಲಿ ಮತಗಟ್ಟೆಗಳಿಗೆ ಬರುವ ಮಹಿಳಾ ಮತದಾರರಿಗೆ ಧೈರ್ಯ ತುಂಬುವ ಹಾಗೂ ಗರಿಷ್ಠ ಮತದಾನಕ್ಕೆ ಪ್ರೇರೇಪಿಸುವುದು ಸ್ವೀಪ್ ಸಮಿತಿಯ ಉದ್ದೇಶವಾಗಿದೆ.
ಸಖಿ ಮತಗಟ್ಟೆಗಳಲ್ಲಿ ಎಲ್ಲಾ ಸಿಬ್ಬಂದಿಗಳು ಮಹಿಳೆಯರೇ ಆಗಿರುವ ಕಾರಣಕ್ಕೆ ಕರ್ತವ್ಯ ನಿರ್ವಹಣೆಯ ಬಗ್ಗೆ ಹೆಮ್ಮೆ ಎನ್ನಿಸುತ್ತಿದೆ, ಚುನಾವಣಾ ಆಯೋಗ ಹಾಗೂ ಸ್ವೀಪ್ ಸಮಿತಿ ನೀಡಿರುವ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುತ್ತೇವೆ ಎಂದು ಕಾಬೆಟ್ಟು ಸಖಿ ಮತಗಟ್ಟೆಯ ಸಿಬ್ಬಂದಿಗಳು ಹೇಳಿದ್ದಾರೆ. ಆದ್ದರಿಂದ ಮತದಾನ ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ಪ್ರಜಾತಂತ್ರ ವ್ಯವಸ್ಥೆ ಬಲಪಡಿಸುವ ನಿಟ್ಟಿನಲ್ಲಿ ಮೇ 10ರ ಚುನಾವಣೆಯಲ್ಲಿ ಎಲ್ಲರೂ ಭಾಗವಹಿಸಿ ತಮ್ಮ ಹಕ್ಕು ಚಲಾಯಿಸಬೇಕಿದೆ.