ಬೆಂಗಳೂರು: ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಬಿಜೆಪಿ ರಾಜ್ಯದಲ್ಲಿ ಹೀನಾಯವಾಗಿ ಸೋಲು ಕಂಡಿತು. ಹೀಗಿರುವಾಗ, ಲೋಕಸಭಾ ಚುನಾವಣೆ ಆದ ಮೇಲೆ ರಾಜ್ಯ ಸರ್ಕಾರ ಪತನವಾಗುತ್ತದೆ ಎಂದು ಹೇಳಲು ಅವರಿಗೆ ಯಾವ ನೈತಿಕತೆಯಿದೆ ಎಂದು ಕೈಗಾರಿಕಾ ಸಚಿವ ಎಂ.ಬಿ ಪಾಟೀಲ ಹೇಳಿದ್ದಾರೆ
ಬೆಂಗಳೂರಿನಲ್ಲಿ ಸುದ್ದಿಗಾರರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಪಕ್ಷಕ್ಕೆ 135 ಸೀಟುಗಳು ಬಂದಿರುವುದರಲ್ಲಿ ಬೊಮ್ಮಾಯಿ ಅವರ ಕೊಡುಗೆಯೂ ಇದೆ ಎಂದರು. ಬೊಮ್ಮಾಯಿ ಅವರು ಮುಖ್ಯಮಂತ್ರಿಯಾದಾಗ ಬುದ್ಧಿವಂತರೊಬ್ಬರು ಆ ಸ್ಥಾನಕ್ಕೆ ಆಯ್ಕೆಯಾಗಿದ್ದಾರೆಂದು ನಾವೂ ಖುಷಿಪಟ್ಟಿದ್ದೆವು. ಆದರೆ, ಅದನ್ನು ಉಳಿಸಿಕೊಳ್ಳಲು ಅವರಿಗೆ ಆಗಲಿಲ್ಲ ಎಂದು ಟೀಕಾಸ್ತ್ರ ಪ್ರಯೋಗಿಸಿದರು.
ಪ್ರತ್ಯೇಕ ರಾಷ್ಟ್ರ ದ ಬಗ್ಗೆ ಸಂಸದ ಡಿ.ಕೆ ಸುರೇಶ್ ಅವರ ಹೇಳಿಕೆ ಬಗ್ಗೆ ಕೇಳಿದಾಗ, ದಕ್ಷಿಣದ ರಾಜ್ಯಗಳಿಗೆ ಆದಾಯಕ್ಕೆ ತಕ್ಕ ಪ್ರತಿಫಲ ಸಿಗಲಿ ಎಂಬುದನ್ನು ಮನಸ್ಸಿನಲ್ಲಿ ಇಟ್ಟುಕೊಂಡು ಅವರು ಹಾಗೆ ಹೇಳಿದ್ದಾರೆ ಅದಕ್ಕೆ ಅಪಾರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದು ಡಿಕೆ ಸುರೇಶ್ ಹೇಳಿಕೆಯನ್ನು ಸಮರ್ಥಿಸಿಕೊಂಡರು.
ಉಡುಪಿ, ಮಂಗಳೂರಿನಲ್ಲಿ ಕೆಲಸ ಬೇಕೇ? ಸರ್ಕಾರಿ, ಅರೆಸರ್ಕಾರಿ, ಖಾಸಗಿ ಕಂಪೆನಿಗಳ ಉದ್ಯೋಗಾವಕಾಶಗಳ ಕುರಿತ ಸಂಪೂರ್ಣ ವಿವರಗಳಿಗೆ ಈ ಲಿಂಕ್ ಕ್ಲಿಕ್ ಮಾಡಿ
ಉಡುಪಿ, ಮಂಗಳೂರಿನಲ್ಲಿ ಕೆಲಸ ಬೇಕೇ? ಸರ್ಕಾರಿ, ಅರೆಸರ್ಕಾರಿ, ಖಾಸಗಿ ಕಂಪೆನಿಗಳ ಉದ್ಯೋಗಾವಕಾಶಗಳ ಕುರಿತ ಸಂಪೂರ್ಣ ವಿವರಗಳಿಗೆ ಈ ಲಿಂಕ್ ಕ್ಲಿಕ್ ಮಾಡಿ