Share this news

ನವದೆಹಲಿ: ಬಿಜೆಪಿಯ ಭೀಷ್ಮ ಎಂದೇ ಖ್ಯಾತಿ ಪಡೆದಿರುವ ಹಾಗೂ ರಾಮ ಮಂದಿರ ನಿರ್ಮಾಣ ಹೋರಾಟದ ರೂವಾರಿ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿಗೆ ಭಾರತ ಸರ್ಕಾರದ ಪರಮೋಚ್ಛ ನಾಗರಿಕ ಗೌರವವಾದ ಭಾರತ ರತ್ನ ಪ್ರದಾನ ಮಾಡಲಾಗುವುದೆಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಘೋಷಿಸಿದ್ದಾರೆ.
ಈ ವಿಚಾರವಾಗಿ ಸಾಮಾಜಿಕ ಜಾಲತಾಣವಾಗಿರುವ X ನಲ್ಲಿ ಈ ಕುರಿತು ಮೋದಿ ವಿಷಯ ಪ್ರಸ್ತಾಪಿಸಿದ್ದು, ಬಿಜೆಪಿಯ ಹಿರಿಯ ಮುತ್ಸದ್ಧಿ ಎಲ್ ಕೆ ಅಡ್ವಾಣಿಯವರಿಗೆ ಭಾರತ ರತ್ನ ನೀಡಲಾಗುತ್ತಿದ್ದು ಇದು ಅತ್ಯಂತ ಸಂತೋಷದ ವಿಚಾರವಾಗಿದೆ ಎಂದು ಸಂತಸ ಹಂಚಿಕೊಂಡಿದ್ದಾರೆ.
ನಾನು ಅವರೊಂದಿಗೆ ಮಾತನಾಡಿದ್ದೇನೆ ಮತ್ತು ಈ ಗೌರವವನ್ನು ಪಡೆದಿರುವುದಕ್ಕೆ ಅವರನ್ನು ಅಭಿನಂದಿಸಿದೆ. ನಮ್ಮ ಕಾಲದ ಅತ್ಯಂತ ಗೌರವಾನ್ವಿತ ರಾಜನೀತಿಜ್ಞರಲ್ಲಿ ಒಬ್ಬರಾದ ಅವರು ಭಾರತದ ಅಭಿವೃದ್ಧಿಗೆ ನೀಡಿದ ಕೊಡುಗೆ ಸ್ಮರಣೀಯವಾಗಿದೆ. ತಳಮಟ್ಟದಲ್ಲಿ ಕೆಲಸ ಮಾಡುವುದರಿಂದ ಹಿಡಿದು ನಮ್ಮ ಉಪ ಪ್ರಧಾನಿಯಾಗಿ ರಾಷ್ಟ್ರದ ಸೇವೆ ಮಾಡಿರುವುದನ್ನು ಮೋದಿ ಸ್ಮರಿಸಿದ್ದಾರೆ. ಅವರು ಕೇಂದ್ರ ಗೃಹ ಮತ್ತು ವಾರ್ತಾ ಮತ್ತು ಪ್ರಸಾರ ಸಚಿವರಾಗಿ ತಮ್ಮನ್ನು ಗುರುತಿಸಿಕೊಂಡರು. ಅವರ ಸಂಸದೀಯ ಮಧ್ಯಸ್ಥಿಕೆಗಳು ಯಾವಾಗಲೂ ಅನುಕರಣೀಯವಾಗಿವೆ, ಶ್ರೀಮಂತ ಒಳನೋಟಗಳಿಂದ ತುಂಬಿವೆ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ

 
 

 

 
 

Leave a Reply

Your email address will not be published. Required fields are marked *