ಬೆಂಗಳೂರು:ಮುಂದಿನ ಚುನಾವಣೆಯಲ್ಲಿ ಬಿಜೆಪಿ ಅಥವಾ ಜೆಡಿಎಸ್ ಗೆ ಮತ ಹಾಕಿದ್ರೆ ಗ್ಯಾರಂಟಿ ಯೋಜನೆಗಳು ರದ್ದುಪಡಿಸಲಾಗುವುದು ಎಂದು ಡಿಸಿಎಂ ಡಿಕೆ ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ.
ಅವರು ಭಾನುವಾರ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆದ ಮಾಜಿ ಪ್ರಧಾನಿ, ಉಕ್ಕಿನ ಮಹಿಳೆ ಇಂದಿರಾ ಗಾಂಧಿಯವರ 106ನೇ ಜನ್ಮ ದಿನಾಚರಣೆ ನಿಮಿತ್ತ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದ ಬಳಿಕ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದರು. ಇದೇ ವೇಳೆ ಅವರು ಮಾತನಾಡಿ ನಮ್ಮ ಗ್ಯಾರಂಟಿ ಯೋಜನೆಗಳು ಜಾರಿಯಾದಾಗ ರಾಜ್ಯ ದಿವಾಳಿ ಆಗುತ್ತೆ ಅಂತಾ ಹೇಳುತ್ತಿದ್ದ ಬಿಜೆಪಿಯವರೇ ಗ್ಯಾರಂಟಿ ಕೊಡಲು ಹೊರಟಿದ್ದಾರೆ,ನೀವು ಬಿಜೆಪಿ ಅಥವಾ ದಳಕ್ಕೆ ವೋಟು ಹಾಕಿದ್ರೆ ಗ್ಯಾರಂಟಿ ಯೋಜನೆಗಳು ರದ್ದಾಗಲಿವೆ ಎಂದು ಡಿಕೆಶಿ ಎಚ್ಚರಿಕೆ ನೀಡಿದರು.








