ಬೆಂಗಳೂರು: ಬಿಜೆಪಿಯಿಂದ ವಿಧಾನಸಭಾ ಚುನಾವಣೆಗೆ 100 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ ಎಂಬುದಾಗಿ ನಕಲಿ ಪಟ್ಟಿಯನ್ನು ರಿಲೀಸ್ ಮಾಡಲಾಗಿತ್ತು. ಈ ಹಿನ್ನಲೆಯಲ್ಲಿ ಕಿಡಿಗೇಡಿತನ ಮೆರೆದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಬಿಜೆಪಿಯಿಂದ ಪೊಲೀಸರಿಗೆ ದೂರು ನೀಡಲಾಗಿದೆ.
ಬಿಜೆಪಿ ಅಭ್ಯರ್ಥಿಗಳ ನಕಲಿ ಪಟ್ಟಿ ಬಿಡುಗಡೆ ಮಾಡಿದ ಕಿಡಿಗೇಡಿಗಳ ವಿರುದ್ದ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಅಶ್ವಥ್ ನಾರಾಯಣ್ , ವಿವೇಕ್ ಸುಬ್ಬಾರೆಡ್ಡಿ ನೇತೃತ್ವದ ಬಿಜೆಪಿ ನಿಯೋಗ ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ನಕಲಿ ಬಿಜೆಪಿ ಪಟ್ಟಿಯ ರಿಲೀಸ್ ಮಾಡಿದ ಕಿಡಿಗೇಡಿಗಳ ವಿರುದ್ಧ ದೂರು ದಾಖಲಿಸಿಕೊಂಡಿರುವ ಮಲ್ಲೇಶ್ವರಂ ಠಾಣಾ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ.