ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಇಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಬಿಜೆಪಿಯ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದ್ದಾರೆ.
ಇಂದು ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಜೆ.ಪಿ.ನಡ್ಡಾ ಅವರು ಬಿಜೆಪಿಯ ಪ್ರಣಾಳಿಕೆ ಬಿಡುಗಡೆ ಮಾಡಿದ್ದಾರೆ. ಪ್ರಣಾಳಿಕೆ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ಜನರ ಹಿತದೃಷ್ಟಿಯಿಮದ ಪ್ರಣಾಳಿಕೆ ತಯಾರಿಸಿದ್ದೇವೆ. ಕೃಷಿಗೆ ಹೆಚ್ಚು ಆದ್ಯತೆ ನೀಡಿದ್ದೇವೆ. ಬಿಪಿಎಲ್ ಕುಟುಂಬಕ್ಕೆ ಪ್ರತಿದಿನ ಅರ್ಧಲೀಟರ್ ನಂದಿನಿ ಹಾಲು ಕೊಡುತ್ತೇವೆ. ಬಡವರ ಕಲ್ಯಾಣಕ್ಕೆ ನಾವು ಮಹತ್ವ ನೀಡಿದ್ದೇವೆ ಎಂದರು.
ಆಯುಷ್ಮಾನ್ ಕಾರ್ಡ್ ಫಲಾನುಭವಿಗಳ ಚಿಕಿತ್ಸಾ ವೆಚ್ಚವನ್ನು 10 ಲಕ್ಷ ರೂ.ಗೆ ಏರಿಕೆ ಮಾಡಲಾಗುವುದು. 5 ಕೆಜಿ ಅಕ್ಕಿ, 5 ಕೆಜಿ ಸಿರಿಧಾನ್ಯ ನೀಡಲಾಗುವುದು, ಬಿಪಿಎಲ್ ಕುಟುಂಬಗಳಿಗೆ ಪ್ರತಿ ವರ್ಷ ಗಣೇಶ ಚತುರ್ಥಿ, ಯುಗಾದಿ, ದೀಪಾವಳಿ ಹಬ್ಬಕ್ಕೆ 3 ಗ್ಯಾಸ್ ಉಚಿತ ಸಿಲಿಂಡರ್ ವಿತರಿಸಲಾಗುವುದು ಎಂದು ತಿಳಿಸಿದ್ದಾರೆ.
ಪೋಷಣೆ ಯೋಜನೆ ಯಡಿ ಹಾಲು ವಿತರಣೆ ಕಿಟ್ ವಿತರಣೆ, ಸರ್ವರಿಗೂmಸೂರು ಯೋಜನೆ 10 ಲಕ್ಷ ವಸತಿ ನಿರ್ಮಾಣ, ಒಂದು ಮನೆ ನಿರ್ಮಾಣಕ್ಕೆ 5 ಲಕ್ಷ ರೂ. ಆರ್ಥಿಕ ನೆರವು ನೀಡಲಾಗುವುದು ಎಂದು ಹೇಳಿದ್ದಾರೆ
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಮತ್ತಿತರು ಉಪಸ್ಥಿತರಿದ್ದರು.