Share this news

ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜೆಡಿಎಸ್ ಮೈತ್ರಿ ವಿಚಾರಕ್ಕೆ ಕುರಿತಂತೆ ದೆಹಲಿಯಲ್ಲಿ ಸೋಮವಾರ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ಪಕ್ಷದ ವರಿಷ್ಠರಾದ ಎಚ್.ಡಿ ದೇವೇಗೌಡ ಸ್ಪಷ್ಟನೆ ನೀಡಿದ್ದಾರೆ.

ಸುದ್ದಿಗಾರರ‌ ಜತೆ ಮಾತನಾಡಿದ ದೇವೇಗೌಡ,ನಾನು ಈ ವಿಚಾರವಾಗಿ ಪ್ರತ್ಯೇಕವಾಗಿ ಪ್ರಧಾನಿ ಮೋದಿಯವರನ್ನು ಭೇಟಿಯಾಗಿಲ್ಲ ಬಿಜೆಪಿ ಜತೆಗೆ ಜೆಡಿಎಸ್ ಮೈತ್ರಿ ಕುರಿತಾಗಿ ನಾನು ಯಾರನ್ನು ಭೇಟಿ ಆಗಿಲ್ಲ ಬಿಜೆಪಿ ಜೆಡಿಎಸ್ ಮೈತ್ರಿ ವಿಚಾರ ಚರ್ಚೆಗೆ ಬಂದರೆ ಆ ಕುರಿತು ಮಾತನಾಡುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ. ಈಗ ನಾವು ಎಲ್ಲಿ ಇದ್ದೇವೋ ಅಲ್ಲೇ ಇರುತ್ತೇವೆ ಎಂದ ಎಚ್ ಡಿ ದೇವೇಗೌಡ,ಪ್ರಸ್ತುತ ಬಿಜೆಪಿ ಜೆಡಿಎಸ್ ಮೈತ್ರಿ ವಿಚಾರದ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ ಎಂದು ದೆಹಲಿಯಲ್ಲಿ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಹೇಳಿದರು.


ಆದರೆ ಲೋಕಸಭಾ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರದಲ್ಲಿ ಬಿಜೆಪಿ ನಾಯಕರು ಆಸಕ್ತಿ ವಹಿಸಿರುವುದು ತೀವ್ರ ಚರ್ಚೆಗೆ ಗ್ರಾಸವಾಗಿತ್ತು.

Leave a Reply

Your email address will not be published. Required fields are marked *