Share this news

ಬೆಳಗಾವಿ: ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುವುದಾಗಿ ವಿಧಾನಪರಿಷತ್ ಸದಸ್ಯ ಲಕ್ಷ್ಮಣ ಸವದಿ ಹೇಳಿದ್ದಾರೆ. ಅವರು ಇಂದು ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡುತ್ತ ಈ ಬಗ್ಗೆ ತಿಳಿಸಿದರು. ಇದೇ ವೇಳೆ ಅವರು ನನಗೆ ಅಥಣಿ ಕ್ಷೇತ್ರದಲ್ಲಿ ಟಿಕೆಟ್‌ ಸಿಗುವ ವಿಶ್ವಾಸವಿತ್ತು. ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆ ಬಗ್ಗೆ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ. ನನ್ನ ಜತೆ ಹಲವು ಜನರು ಕೆಲಸ ಮಾಡುತ್ತಿದ್ದರು. ಅಥಣಿ ಕ್ಷೇತ್ರದಲ್ಲಿ ಜನರೇ ಹೈಕಾಮಾಂಡ್‌. 20 ವರ್ಷದಿಂದ ಬಿಜೆಪಿ ಪಕ್ಷಕ್ಕೆ ನನ್ನಿಂದ ಸಮಸ್ಯೆಯಾಗಿದ್ರೆ‌, ಕ್ಷಮಿಸಿ, ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಮುಂದಿನ ನಿರ್ಧಾರವನ್ನು ನಾಳೆ ಸಂಜೆಯೇ ತಿಳಿಸುತ್ತೇನೆ ಎಂದಿದ್ದಾರೆ.

ಈ ನಡುವೆ ಕಾಂಗ್ರೆಸ್‌ ಕೂಡ ಲಕ್ಷ್ಮಣ ಸವದಿ ಅವರನ್ನು ಸಂಪರ್ಕಿಸಿದ್ದು, ಅವರು ಕಾಂಗ್ರೆಸ್‌ ಕೂಡ ಸೇರಬಹುದು ಎನ್ನುವುದು ಸದ್ಯದ ಮಾಹಿತಿಯಾಗಿದೆ. ಇನ್ನೂ ಎಂಎಲ್‌ಸಿ ಸ್ಥಾನಕ್ಕೆ ಕೂಡ ಅವರು ರಾಜೀನಾಮೆ ನೀಡಬಹುದು ಎನ್ನಲಾಗಿದೆ. ಎರಡು ದಶಕಗಳ ಕಾಲ ಬಿಜೆಪಿಯಲ್ಲಿ ಇದ್ದು ಯಾರಿಗೆ ಆದ್ರೂ ನೋವು ಆಗಿದ್ದರೆ ಸಾರಿ ಅಂಥ ಅವರು ಹೇಳಿದರು. ಇನ್ನೂ ರಮೇಶ್‌ ಜಾರಕಿ ಹೊಳಿ ಸೇರಿದಂತೆ ಎಲ್ಲರಿಗೂ ಸಿಎಂ ಆಗೋ ಸಾಧ್ಯತೆ ಇದೇ ಅಂತ ತಿಳಿಸಿದ್ದಾರೆ.

ಟಿಕೆಟ್ ಘೋಷಣೆಯಿಂದ ರಾಜ್ಯ ಬಿಜೆಪಿಯಲ್ಲಿ ಭಿನ್ನಮತ‌ ಭುಗಿಲೆದ್ದಿದ್ದು ಪ್ರಮುಖ ಘಟಾನುಘಟಿ ‌ನಾಯಕರಿಗೆ ಈ ಬಾರಿ ಟಿಕೆಟ್ ಕೈತಪ್ಪಿರುವ ಕಾರಣದಿಂದ ಸಹಜವಾಗಿ ಎಲ್ಲಾ ಹಿರಿಯ ನಾಯಕರು ಅಸಮಾಧಾನ ವ್ಯಕ್ತಪಡಿಸುತ್ತಿದ್ದು, ಕೆಲವರು ಬಹಿರಂಗವಾಗಿ ಅಸಮಾಧಾನ ಹೊರಹಾಕಿದರೆ ಇನ್ನು ಕೆಲವರು ಒಳಗೊಳಗೆ ಕೆಂಡಕಾರುತ್ತಿದ್ದಾರೆ

Leave a Reply

Your email address will not be published. Required fields are marked *