Share this news

ಬೆಂಗಳೂರು: ಮಾಜಿ ಶಾಸಕಿ ಬಿಜೆಪಿಯ ಪೂರ್ಣಿಮಾ ಶ್ರೀನಿವಾಸ್ ಇಂದು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ.
ಶುಕ್ರವಾರ ಮಧ್ಯಾಹ್ನ 12 ಗಂಟೆಗೆ ಕೆಪಿಸಿಸಿ ಕಚೇರಿಯಲ್ಲಿ ಪೂರ್ಣಿಮಾ ಬಿಜೆಪಿಗೆ ತೊರೆದು ಕಾಂಗ್ರೆಸ್ ಸೇರಲಿದ್ದಾರೆ. ಇದೇವೇಳೆ ಪತಿ ಶ್ರೀನಿವಾಸ್ ಕೂಡ ಬಿಜೆಪಿ ತೊರೆದು ಕಾಂಗ್ರೆಸ್ ಸೇರಲಿದ್ದಾರೆ.

ಬಿಜೆಪಿಯಿಂದ ಗೊಲ್ಲ ಸಮುದಾಯದ‌ ಕಡೆಗಣನೆ: ಪೂರ್ಣಿಮಾ ಆರೋಪ

ನಾನು ಬಿಜೆಪಿಯಲ್ಲಿದ್ದಾಗ ಗೊಲ್ಲ ಸಮುದಾಯಕ್ಕೆ ಮನ್ನಣೆ ನೀಡಲಿಲ್ಲ. ನಮ್ಮ ಸಮುದಾಯ 25 ಲಕ್ಷ ಜನಸಂಖ್ಯೆ ಹೊಂದಿದೆ, ನಮ್ಮ ಸಮುದಾಯದ ಬೇಡಿಕೆಗಳಿಗೆ ಮನ್ನಣೆ ಸಿಗಲಿಲ್ಲ, ಹಾಗಾಗಿ ಬಿಜೆಪಿ ತೊರೆಯಬೇಕಾಗಿ ಬಂತು ಎಂದು ಪೂರ್ಣಿಮಾ ಶ್ರೀನಿವಾಸ್ ಹೇಳಿದರು.
ಆದರೆ ಪೂರ್ಣಿಮಾ ಶ್ರೀನಿವಾಸ್ ಕಾಂಗ್ರೆಸ್ ಸೇರ್ಪಡೆ ವಿಚಾರದಲ್ಲಿ ಗೊಲ್ಲ ಸಮುದಾಯದ ಹಲವರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

 

 

 

 

 

 

 

 

Leave a Reply

Your email address will not be published. Required fields are marked *