ಬೆಂಗಳೂರು: ಕರ್ನಾಟಕದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲಿದ್ದು,ಬಸವರಾಜ ಬೊಮ್ಮಾಯಿಯವರು ಮುಖ್ಯಮಂತ್ರಿಯಾಗಿ ಎರಡನೇ ಅವಧಿಗೆ ಮುಂದುವರಿಯಲಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅಧಿಕೃತವಾಗಿ ಘೋಷಿಸಿದ್ದಾರೆ. ಈ ಮುಲಕ ಬಿಜೆಪಿಯ ಮುಂದಿನ ಸಿಎಂ ಯಾರು ಎನ್ನುವ ಗೊಂದಲಕ್ಕೆ ನಡ್ಡಾ ತೆರೆ ಎಳೆದಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಮಾಡಿರುವ ಅಭಿವೃದ್ಧಿ ಕೆಲಸಗಳೇ ಬಿಜೆಪಿ ಗೆಲುವಿಗೆ ಶ್ರೀರಕ್ಷೆಯಾಗಿದ್ದು, ಮಾಜಿ ಸಿಎಂ ಯಡಿಯೂರಪ್ಪ ಅವರ ನಾಯಕತ್ವದಲ್ಲಿ ಈ ಬಾರಿಯ ಚುನಾವಣೆ ನಡೆಯುತ್ತಿದ್ದು, ಬಿಜೆಪಿ ಭರ್ಜರಿ ಬಹುಮತದಿಂದ ಸರ್ಕಾರ ರಚಿಸಲಿದೆ ಎಂದರು.ಈಗಾಗಲೇ ಪ್ರಧಾನಿ ನರೇಂದ್ರ ಮೋದಿ ಹಾಗೂ ಯುಪಿ ಸಿಎಂ ಯೊಗಿ ಆದಿತ್ಯನಾಥ್ ಪ್ರಚಾರದಲ್ಲಿ ಭಾಗಿಯಾಗಿದ್ದು,ಇದರಿಂದ ಬಿಜೆಪಿ ಗೆಲುವು ನಿಶ್ಚಿತ ಎಂದರು.