ನವದೆಹಲಿ: ಭಾರತೀಯ ಜನತಾ ಪಕ್ಷ ತನ್ನ ರಾಷ್ಟ್ರೀಯ ಮಂಡಳಿಯನ್ನು ಪುನರ್ ರಚಿಸಿ ಹೊಸ ಪಟ್ಟಿ ಬಿಡುಗಡೆ ಮಾಡಿದ್ದು, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಸಿ.ಟಿ.ರವಿಗೆ ಅವರಿಗೆ ಕೊಕ್ ನೀಡಲಾಗಿದೆ.
ಬಿಜೆಪಿ ಸಂಘಟನಾ ಪ್ರಧಾನ ಕಾರ್ಯದರ್ಶಿಯಾಗಿ ಬಿ.ಎಲ್.ಸಂತೋಷ್ ಅವರನ್ನು ಮುಂದುವರೆಸಲಾಗಿದೆ. ತೆಲಂಗಾಣದ ಸಂಜಯ್ ಬಂಡಿಗೆ ಪ್ರಧಾನ ಕಾರ್ಯದರ್ಶಿ ಹುದ್ದೆ ನೀಡಲಾಗಿದ್ದು, ಎಂಟು ನಾಯಕರನ್ನು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಳಾಗಿ ನೇಮಕ ಮಾಡಲಾಗಿದೆ. 13 ನಾಯಕರನ್ನು ರಾಷ್ಟ್ರೀಯ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.
ಇನ್ನು ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರ ಅಧಿಕಾರವಧಿ ಮುಗಿದಿದ್ದು, ವಿಧಾನಸಭೆ ಚುನಾವಣೆ ಮುಗಿಯುವವರೆಗೆ ಮುಂದುವರೆಸಲಾಗಿತ್ತು. ಇದೀಗ ಚುನಾವಣೆ ಮುಗಿದಿದ್ದು, ಅಧ್ಯಕ್ಷ ಸ್ಥಾನ ಬದಲಾವಣೆಯಾಗಬೇಕು ಎಂಬ ಮಾತು ಬಿಜೆಪಿ ಪಾಳಯದಲ್ಲೇ ಕೇಳಿಬರುತ್ತಿದೆ. ಹೀಗಾಗಿ ಸಿಟಿ ರವಿ ಅವರನ್ನು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಿಂದ ಕೈಬಿಟ್ಟು, ರಾಜ್ಯಾಧ್ಯಕ್ಷ ಸ್ಥಾನದಲ್ಲಿ ಕೂಡಿಸಲು ಬಿಜೆಪಿ ಕೇಂದ್ರ ನಾಯಕರು ಪ್ಲಾನ್ ರೂಪಿಸಿದ್ದಾರಾ ಎನ್ನುವ ಮಾತುಗಳು ಕೇಳಿಬರುತ್ತಿವೆ.