ಪಾಟ್ನಾ: ಬಿಹಾರ ರಾಜಕೀಯ ಭಾರಿ ಕುತೂಹಲ ಕೆರಳಿಸಿದ್ದು,ಬಿಹಾರ ಸಿಎಂ ನಿತೀಶ್ ಕುಮಾರ್ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಬಿಹಾರ ರಾಜ್ಯಪಾಲರಾದ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರನ್ನು ಭೇಟಿ ಮಾಡಿದ ನಿತೀಶ್ ಕುಮಾರ್ ಅಧಿಕೃತವಾಗಿ ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಈ ಮೂಲಕ ಆರ್‌ಜೆಡಿ, ಕಾಂಗ್ರೆಸ್, ಎಡರಂಗ ಹಾಗೂ ಜೆಡಿಯು ಮೈತ್ರಿ ಸರ್ಕಾರ ಪತನಗೊಂಡಿದೆ.
ಇನ್ನೊಂದೆಡೆ, ಬಿಜೆಪಿ ಜತೆಗೆ ಸೇರಿ ಇಂದು ಸಂಜೆ ಮತ್ತೆ ಜೆಡಿಯು – ಬಿಜೆಪಿ ಸರ್ಕಾರ ರಚನೆಯಾಗುವುದು ಬಹುತೇಕ ಖಚಿತವಾಗಿದೆ. ಇಂದು ಸಂಜೆ 4 ಗಂಟೆ ಅಥವಾ 5 ಗಂಟೆಯ ವೇಳೆಗೆ ನಿತೀಶ್ ಕುಮಾರ್ ಮತ್ತೆ ಸಿಎಂ ಆಗ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ಹೇಳಿವೆ.
ಜನತಾ ದಳ (ಸಂಯುಕ್ತ) ಅನುಭವಿ ಈಗ ಬಿಜೆಪಿಯೊಂದಿಗೆ ಹೊಸ ಸರ್ಕಾರ ರಚಿಸಲು ಹಕ್ಕು ಸಾಧಿಸಲಿದೆ ಎಂದು ತಿಳಿದುಬಂದಿದೆ.
ಬಿಹಾರ ರಾಜ್ಯಪಾಲರ ಜತೆ ಮಾತನಾಡಿದ ನಿತೀಶ್ ಕುಮಾರ್, ರಾಜ್ಯದಲ್ಲಿನ ಮಹಾಘಟಬಂಧನ ಸರ್ಕಾರಕ್ಕೆ (ಆರ್‌ಜೆಡಿ, ಕಾಂಗ್ರೆಸ್) ನೀಡಿದ ಬೆಂಬಲವನ್ನು ಹಿಂತೆಗೆದುಕೊಂಡಿದ್ದಾಗಿ ಹೇಳಿ ರಾಜೀನಾಮೆ ನೀಡಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ಈ ಮಧ್ಯೆ, ರಾಜೀನಾಮೆ ಪತ್ರ ನೀಡಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ನಿತೀಶ್ ಕುಮಾರ್, ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿರುವುದನ್ನು ದೃಢಪಡಿಸಿದರು. ಅಲ್ಲದೆ, ಮಹಾಘಟಬಂಧನದ ಬಿಹಾರ ಸರ್ಕಾರದಲ್ಲಿ ಯಾವ ಕೆಲಸಗಳೂ ಸರಿಯಾಗಿ ನಡೆಯುತ್ತಿಲ್ಲ ಎಂದೂ ನಿತೀಶ್ ಕುಮಾರ್ ಆರೋಪಿಸಿದ್ದಾರೆ. ಇನ್ನು, ಬಿಜೆಪಿ ಜತೆಗೆ ಸರ್ಕಾರ ರಚನೆ ಬಗ್ಗೆ ತುಟಿ ಬಿಚ್ಚಿಲ್ಲ. ಆದರೆ, ಬಿಜೆಪಿ ನೀಡಿರುವ ಬೆಂಬಲದ ಪತ್ರದ ಬಗ್ಗೆ ಅಪ್ಡೇಟ್ ನೀಡುವುದಾಗಿ ಹೇಳಿದ್ದಾರೆ.
ಉಡುಪಿ, ಮಂಗಳೂರಿನಲ್ಲಿ ಕೆಲಸ ಬೇಕೇ? ಸರ್ಕಾರಿ, ಅರೆಸರ್ಕಾರಿ, ಖಾಸಗಿ ಕಂಪೆನಿಗಳ ಉದ್ಯೋಗಾವಕಾಶಗಳ ಕುರಿತ ಸಂಪೂರ್ಣ ವಿವರಗಳಿಗೆ ಈ ಲಿಂಕ್ ಕ್ಲಿಕ್ ಮಾಡಿ