Share this news

ಬೆಳಗಾವಿ: ಬಿಜೆಪಿಯಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಅತ್ಯಂತ ಪವರ್ ಫುಲ್ ನಾಯಕ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.


ಅವರು ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಯಡಿಯೂರಪ್ಪ ಬಿಟ್ಟರೆ ಬಿಜೆಪಿಗೆ ಬೇರೆ ಪ್ರಬಲ ನಾಯಕರಿಲ್ಲ ಹಾಗಾಗಿ ಅವರ ಮಗನಿಗೆ ರಾಜ್ಯಾಧ್ಯಕ್ಷ ಸ್ಥಾನ ನೀಡಿ ಕೆಂದ್ರ ನಾಯಕರು ಕುಟುಂಬ ರಾಜಕಾರಣಕ್ಕೆ ಮಣೆ ಹಾಕಿದ್ದಾರೆ, ಮೊದಲು ಕಾಂಗ್ರೆಸ್‌ ಕುಟುಂಬ ರಾಜಕಾರಣ ಮಾಡುತ್ತಿದೆ ಎಂದು ಟೀಕೆ ಮಾಡುತ್ತಿದ್ದರು. ಈಗ ಬಿಜೆಪಿ ಪಕ್ಷದಲ್ಲಿಯೂ ವರಿಷ್ಠರ ಮಕ್ಕಳು ಶಾಸಕರು, ವಿಧಾನ ಪರಿಷತ್ ಸದಸ್ಯರು ಆಗಿದ್ದಾರೆ ಎಂದ ಅವರು, ಯಡಿಯೂರಪ್ಪನವರ ಮಗ ಎಂದಾಕ್ಷಣ ಎಲ್ಲಾ ಕಾರ್ಯಕರ್ತರು ಅವರ ಹಿಂದೆ ಬರುವುದಿಲ್ಲ. ಅಂತಹ ವ್ಯಕ್ತಿತ್ವ ಬೆಳೆಸಿಕೊಳ್ಳಬೇಕಾಗುತ್ತದೆ ಎಂದು ತಿಳಿಸಿದ್ದಾರೆ.

ಬಿಜೆಪಿಯಲ್ಲಿ ಯಡಿಯೂರಪ್ಪ ಅವರಿಗಿದ್ದ ಆಕರ್ಷಣೆ ಯಾರಿಗೂ ಬರಲಾರದು. ಅದೇ ರೀತಿ ನಮ್ಮ ಪಕ್ಷದಲ್ಲಿ ಸಿದ್ದರಾಮಯ್ಯ ಅವರಿದ್ದಾರೆ. ಇನ್ನು ವಿಜಯೇಂದ್ರ ಅವರು ಕಲಿಯಬೇಕಾದದ್ದು ಬಹಳಷ್ಟಿದೆ. ಪಕ್ಷವೂ ಅವರನ್ನು ಸಾಕಷ್ಟು ಬಳಸಿಕೊಳ್ಳಬೇಕಿದೆ ಎಂದರಲ್ಲದೇ ವಿಜಯೇಂದ್ರ ನೇಮಕದಿಂದ ಕಾಂಗ್ರೆಸ್‌ಗೆ ಯಾವುದೇ ನಷ್ಟವಿಲ್ಲ ಎಂದರು

Leave a Reply

Your email address will not be published. Required fields are marked *