ಬೆಂಗಳೂರು:ಚಂದ್ರಯಾನ -3 ರ ಚಂದ್ರನ ಲ್ಯಾಂಡರ್ ಇಳಿದ ಸ್ಥಳವನ್ನು ಶಿವಶಕ್ತಿ ಎಂದು ಚಂದ್ರಯಾನ -2 ಪತನಗೊಂಡ ಸ್ಥಳಕ್ಕೆ ತಿರಂಗಾ ಎಂಬುದಾಗಿ ನಾಮಕರಣ ಮಾಡಲಾಗುತ್ತದೆ. ಚಂದ್ರನ ಮೇಲೆ ಚಂದ್ರಯಾನ-3 ಇಳಿದ ಆಗಸ್ಟ್.23ರ ದಿನವನ್ನು ರಾಷ್ಟ್ರೀಯ ಬಾಹ್ಯಾಕಾಶ ದಿನವಾಗಿ ಆಚರಿಸಲಾಗುತ್ತದೆ ಎಂಬುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದರು.
ಅವರು ಶನಿವಾರ ಮುಂಜಾನೆ ಅಥೆನ್ಸ್ ನಿಂದ ನೇರವಾಗಿ ಬೆಂಗಳೂರಿನ ಎಚ್ ಎಎಲ್ ವಿಮಾನ ನಿಲ್ದಾಣದಕ್ಕೆ ಬಂದಿಳಿದ ಬಳಿಕ ಪೀಣ್ಯದಲ್ಲಿನ ಇಸ್ರೋ ಕಚೇರಿಗೆ ತೆರಳಿ ಇಸ್ರೋ ಮುಖ್ಯಸ್ಥ ಎಸ್.ಸೋಮನಾಥ್ ಹಾಗೂ ಅವರ ತಂಡವನ್ನು ಅಭಿನಂದಿಸಿದರು.ಚAದ್ರನ ದಕ್ಷಿಣ ದ್ರುವದ ಮೇಲೆ ವಿಕ್ರಮ್ ಲ್ಯಾಂಡರನ್ನು ಯಶಸ್ವೀಯಾಗಿ ಇಳಿಸಿದ ಭಾರತದ ವಿಜ್ಞಾನಿಗಳ ಸಾಧನೆಗೆ ಪ್ರಧಾನಿ ಮುಕ್ತಕಂಠದಿAದ ಅಭಿನಂದಿಸಿದರು.
ಇಸ್ರೋ ಕಮಾಂಡಿAಗ್ ಸೆಂಟರ್ ನಲ್ಲಿ ವಿಜ್ಞಾನಿಗಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಚಂದ್ರಯಾನ 3 ರ ವಿಕ್ರಮ್ ಲ್ಯಾಂಡರ್ ಇಳಿದ ಸ್ಥಳವನ್ನು ಶಿವಶಕ್ತಿ ಎಂದು ಕರೆಯಲಾಗುವುದು ಎಂದು ಪ್ರಧಾನಿ ಮೋದಿ ಎಂದು ಘೋಷಿಸಿದರು.ಚಂದ್ರಯಾನ 3 ರ ಯಶಸ್ಸಿನಿಂದಾಗಿ ದೇಶೀಯ ಉತ್ಪಾದನೆಗೆ ಉತ್ತೇಜನ ನೀಡಿರುವುದನ್ನು ಉಲ್ಲೇಖಿಸಿ ವಿಜ್ಞಾನಿಗಳು ಮೇಕ್ ಇನ್ ಇಂಡಿಯಾ ಉಪಕ್ರಮವನ್ನು ಚಂದ್ರನತ್ತ ಕೊಂಡೊಯ್ದಿದ್ದಾರೆ ಎಂದು ಅವರು ಹೇಳಿದರು.ಅಲ್ಲದೇ ವಿಫಲಗೊಂಡ ಚಂದ್ರಯಾನ 2ರ ಚಂದ್ರನ ಮೇಲಿನ ಸ್ಥಳಕ್ಕೆ ತಿರಂಗಾ ಎಂದು ಹೆಸರಿಡಲಾಗಿದೆ ಎಂದು ಪ್ರಧಾನಿ ಮೋದಿ ಶನಿವಾರ ಪ್ರಕಟಿಸಿದರು.
ಇದಕ್ಕೂ ಮೊದಲು ಎಚ್‌ಎಎಲ್ ವಿಮಾನ ನಿಲ್ದಾಣದ ಬಳಿ ಮಾತನಾಡಿದ ಅವರು, ಜೈ ಜವಾನ್, ಜೈ ಕಿಸಾನ್, ಜೈ ವಿಜ್ಞಾನ್ ಎಂಬುದಾಗಿಯೇ ಮಾತು ಆರಂಭಿಸಿದರು. ಚಂದ್ರಯಾನ-3ರ ವಿಜ್ಞಾನಿಗಳ ಸಾಧನೆ ಬಗ್ಗೆ ಇಡೀ ದೇಶವೇ ಹೆಮ್ಮೆ ಪಡುತ್ತಿದೆ.ನಮ್ಮ ವಿಜ್ಞಾನಿಗಳ ಶಕ್ತಿ ಇಡೀ ಜಗತ್ತಿಗೆ ತಿಳಿಯುವಂತೆ ಮಾಡಿದ ಇಸ್ರೋ ವಿಜ್ಞಾನಿಗಳ ಅಸಾಮಾನ್ಯ ಸಾಧನೆಯನ್ನು ಶ್ಲಾಘಿಸಿದರು.ನಾನು ವಿದೇಶದಲ್ಲಿ ಇರುವಾಗಲೇ ಚಂದ್ರಯಾನ-3 ಯಶಸ್ವಿಯಾದ ಬಳಿಕ ಇಸ್ರೋಗೆ ಭೇಟಿ ನೀಡಲು ನಿರ್ಧರಿಸಿದ್ದೆ, ಇಂದು ವಿದೇಶದಿಂದಲೇ ನೇರವಾಗಿ ಬೆಂಗಳೂರಿಗೆ ಆಗಮಿಸಿದ್ದೇನೆ.ವಿಜ್ಞಾನಿಗಳು ಇಂತಹ ಸಾಧನೆಯನ್ನು ಮಾಡುವ ಮೂಲಕ ಜಗತ್ತಿನ ಬಲಿಷ್ಠ ದೇಶಗಳ ಎದುರು ಭಾರತದ ಶಕ್ತಿ ಏನೆಂದು ತೋರಿಸಿಕೊಟ್ಟಿದ್ದಾರೆ ಎಂದರು.