Share this news

ಬೆಂಗಳೂರು:ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುವುದನ್ನು ವಿರೋಧಿಸಿ ಮಂಗಳವಾರ ನಡೆದ ಬೆಂಗಳೂರು ಬಂದ್ ಸಂದರ್ಭದಲ್ಲಿ ಗಲಭೆ ನಿಯಂತ್ರಿಸಲು ನಗರದಾದ್ಯಂತ ಪೊಲೀಸ್‌ ಬಿಗಿಬಂದೋಬಸ್ತ್ ನಡೆಸಿದರು.
ಪ್ರತಿಭಟನೆಯ ಸಂದರ್ಭದಲ್ಲಿ ಭದ್ರತೆಗೆ ನಿಯೋಜನೆಗೊಂಡ ಪೊಲೀಸರಿಗೆ ಹೋಟೆಲ್‌ನಿಂದ ಸರಬರಾಜು ಮಾಡಲಾಗಿದ್ದ ಉಪಹಾರದಲ್ಲಿ ಸತ್ತ ಇಲಿ ಪತ್ತೆಯಾಗಿದೆ.
ಯಶವಂತಪುರ ಯಾರ್ಡ್‌ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭದ್ರತೆಗೆ ನಿಯೋಜಿಸಲಾಗಿದ್ದ ಯಶವಂತಪುರ ಟ್ರಾಫಿಕ್ ಪೊಲೀಸರಿಗೆ ತಂದಿದ್ದ ಉಪಾಹಾರದಲ್ಲಿ ಸತ್ತ ಇಲಿ ಪತ್ತೆಯಾಗಿದೆ. ಪೊಲೀಸ್‌ ಇಲಾಖೆಯಿಂದ ಸರಬರಾಜು ಮಾಡಿದ ಊಟದ ಪ್ಯಾಕೆಟ್​ ತೆರೆದಾಗ ಅದರಲ್ಲಿ ಇಲಿ ಕಂಡುಬಂದಿದೆ. ಈ ಫೋಟೋ ಈಗ ಎಲ್ಲೆಡೆ ವೈರಲ್‌ ಆಗಿದೆ.

ಪೊಲೀಸ್‌ ಸಿಬ್ಬಂದಿಗೆ ನೀಡಿದ ಊಟದಲ್ಲಿ ಇಲಿ ಇರುವ ವಿಚಾರ ತಿಳಿದು ಸಂಚಾರಿ ವಿಭಾಗ ಜಂಟಿ ಪೊಲೀಸ್ ಆಯುಕ್ತ ಅನುಚೇತ್ ಉಪಹಾರ ಪೂರೈಕೆ ಮಾಡಿದವರನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ. ಒಂದು ದಿನದ ಉಪಹಾರ ಹಾಗೂ ಊಟಕ್ಕೆ ಸರ್ಕಾರ ತಲಾ 200 ರೂಪಾಯಿ ಕೊಡುತ್ತದೆ. ಆದರೆ ಗುಣಮಟ್ಟದ ಊಟ ಯಾಕೆ ಕೊಟ್ಟಿಲ್ಲ ಎಂದು ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡಿದ್ದಾರೆ.
ಅಶೋಕ್ ಟಿಫಿನ್ ಸೆಂಟರ್‌ನಿಂದ ಉಪಹಾರ ಪೂರೈಕೆ ಮಾಡಲಾಗಿದೆ ಎಂದು ತಿಳಿದುಬಂದಿದ್ದು, ಅಶೋಕ್ ಟಿಫಿನ್ ಸೆಂಟರ್​ ಒಟ್ಟು 180 ಊಟ ನೀಡಿದೆ ಎನ್ನಲಾಗಿದೆ. ಸತ್ತ ಇಲಿ ಇರುವ ಊಟ ನೀಡಿರುವ ಬಗ್ಗೆ ಪೊಲೀಸ್ ಸಿಬ್ಬಂದಿ ಆಕ್ರೋಶಗೊಂಡಿದ್ದಾರೆ.ಕಳಪೆ ಗುಣಮಟ್ಟದ ಉಪಹಾರ ಪೂರೈಕೆ ಮಾಡಿದ ಹೋಟೆಲ್ ವಿರುದ್ಧ ಸೂಕ್ತ ಕ್ರಮಕ್ಕೆ ಬಿಬಿಎಂಪಿಯನ್ನು ಒತ್ತಾಯಿಸಿದ್ದಾರೆ.

 

Leave a Reply

Your email address will not be published. Required fields are marked *