Share this news

ಬೆಂಗಳೂರು: ಇತ್ತೀಚಿಗೆ ಬೆಂಗಳೂರಿನಲ್ಲಿ ಸರಣಿ ಬಾಂಬ್ ಸ್ಫೋಟ ಕೃತ್ಯಕ್ಕೆ ಸಂಚು ರೂಪಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಪಾಕಿಸ್ತಾನ ಮೂಲದ ಲಷ್ಕರ್-ಇ-ತೋಯ್ಬಾ ಭಯೋತ್ಪಾದಕ ಸಂಘಟನೆ ಐವರು ಶಂಕಿತ ಉಗ್ರರಿಗೆ ಮತ್ತೆ 10 ದಿನಗಳು ಪೊಲೀಸ್ ಕಸ್ಟಡಿಗೆ ವಹಿಸಿ ಎನ್‌ಎಐ ವಿಶೇಷ ನ್ಯಾಯಾಲಯವು ಆದೇಶಿಸಿದೆ.

ಜು.19 ರಂದು ಹೆಬ್ಬಾಳ ಸಮೀಪದ ಸುಲ್ತಾನ್ ಪಾಳ್ಯದ ಸೈಯದ್ ಸುಹೇಲ್‌ಖಾನ್ ಮನೆ ಮೇಲೆ ಸಿಸಿಬಿ ದಾಳಿ ನಡೆಸಿ ಸುಹೇಲ್, ಪುಲಿಕೇಶಿ ನಗರದ ಮೊಹಮದ್ ಫೈಜಲ್ ರಬ್ಬಾನಿ, ಕೊಡಿಗೇಹಳ್ಳಿಯ ಮಹಮದ್ ಉಮರ್, ಜಾಹೀದ್ ತಬ್ರೇಜ್ ಹಾಗೂ ಆರ್.ಟಿ.ನಗರದ ಸೈಯದ್ ಮುದಾಸೀರ್ ಪಾಷ ಬಂಧಿಸಿದ ಸಿಸಿಬಿ ಪೊಲೀಸರು, ವಿಚಾರಣೆ ವೇಳೆ ಬೆಂಗಳೂರಿನಲ್ಲಿ ಸರಣಿ ವಿಧ್ವಂಸಕ ಕೃತ್ಯಕ್ಕೆ ಆರೋಪಿಗಳು ಸಜ್ಜಾಗಿ ಆತಂಕಕಾರಿ ಸಂಗತಿ ಬಯಲಾಗಿತ್ತು. ಬಳಿಕ ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ತನಿಖೆ ಸಲುವಾಗಿ 7 ದಿನಗಳು ಪೊಲೀಸ್ ಕಸ್ಟಡಿಗೆ ಸಿಸಿಬಿ ಅಧಿಕಾರಿಗಳು ಪಡೆದಿದ್ದರು.


ಈ ಪ್ರಕರಣ ಸಂಬAಧ ವಿಚಾರಣೆ ಸಲುವಾಗಿ ಜೈಲಿನಲ್ಲಿರುವ 2008ರ ಬೆಂಗಳೂರು ಸರಣಿ ಬಾಂಬ್ ಸ್ಫೋಟ ಪ್ರಕರಣದ ಆರೋಪಿ ನಸೀರ್‌ನನ್ನು ವಶಕ್ಕೆ ಪಡೆಯಲು ಬಾಡಿ ವಾರೆಂಟ್ ಕೋರಿ ನ್ಯಾಯಾಲಯಕ್ಕೆ ಸಿಸಿಬಿ ಮನವಿ ಮಾಡಿತು. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯವು, ನಸೀರ್‌ನನ್ನು ಹಾಜರುಪಡಿಸಲು ಸೂಚಿಸಿತು.

Leave a Reply

Your email address will not be published. Required fields are marked *