Share this news

ಬೆಂಗಳೂರು : ಪ್ರತ್ಯೇಕ ರಾಷ್ಟ್ರ ಹೇಳಿಕೆ ಖಂಡಿಸಿ ಡಿಕೆ ಸುರೇಶ್ ವಿರುದ್ಧ ಬಿಜೆಪಿ ಪ್ರತಿಭಟಿಸುತ್ತಿದೆ. ಈ ನಡುವೆ ಕಾರ್ಯಕರ್ತರು ಡಿ.ಕೆ.ಸುರೇಶ್​ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದರು. ಅದರಂತೆ ಬೆಂಗಳೂರಿನ ಸದಾಶಿವನಗರದ ಡಿಕೆ ಸುರೇಶ್ ನಿವಾಸದ ಬಳಿ ಕೆಲ ಕಾಲ ಹೈಡ್ರಾಮಾ ನಡೆಯಿತು. ಡಿ.ಕೆ.ಸುರೇಶ್​ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಲಾಯಿತು. ಇದೇ ವೇಳೆ ಪೊಲೀಸರು ಬಿಜೆಪಿ ಕಾರ್ಯಕರ್ತರನ್ನು ವಶಕ್ಕೆ ಪಡೆದರು.

ಅದೇ ರೀತಿಯಾಗಿ ವಿಜಯಪುರದಲ್ಲಿಯೂ ಕೂಡ ಕಾಂಗ್ರೆಸ್ ಕಚೇರಿಗೆ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ಮೂಲಕ ಮುತ್ತಿಗೆ ಹಾಕಲು ಯತ್ನಿಸಿದರು ಈ ವೇಳೆ ಪೊಲೀಸರು ಅವರನ್ನು ತಡೆದು ವಶಕ್ಕೆ ಪಡೆದುಕೊಂಡರು. ಸುಮಾರು ನೂರಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರು ಈ ವೇಳೆ ಸಂಸದ ಡಿಕೆ ಸುರೇಶ್ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು.

ಕೇಂದ್ರ ಸರ್ಕಾರ ಮಧ್ಯಂತರ ಬಜೆಟ್ ಮಂಡನೆ ಮಾಡಿದ್ದು, ಈ ಬಜೆಟ್​​ ಅನ್ನು ಟೀಕಿಸುವ ಭರದಲ್ಲಿ ಕಾಂಗ್ರೆಸ್ ಸಂಸದ ಡಿಕೆ ಸುರೇಶ್ ಅವರು ಪ್ರತ್ಯೇಕ ರಾಷ್ಟ್ರದ ಹೇಳಿಕೆಯನ್ನು ನೀಡಿದ್ದರು. ಕೇಂದ್ರದ ಬಜೆಟ್‌ನಲ್ಲಿ ಹೊಸತೇನು ಇಲ್ಲ. ದಕ್ಷಿಣ ಭಾರತದ ರಾಜ್ಯಗಳಿಗೆ ಕೇಂದ್ರ ಹಣ ಬಿಡುಗಡೆ ಮಾಡುತ್ತಿಲ್ಲ. ಹೀಗೆ ಅನ್ಯಾಯ ಆಗುತ್ತಿದ್ದರೆ ಪ್ರತ್ಯೇಕ ರಾಷ್ಟ್ರ ಕೇಳಬೇಕಾಗುತ್ತದೆ. ದಕ್ಷಿಣ ಭಾರತದವರು ಧ್ವನಿ ಎತ್ತಬೇಕಾಗುತ್ತದೆ ಎಂದಿದ್ದರು.

ಪ್ರತ್ಯೇಕ ರಾಷ್ಟ್ರದ ಹೇಳಿಕೆಗೆ ವ್ಯಾಪಕ ಟೀಕೆ ವ್ಯಕ್ತವಾಗುತ್ತಿದ್ದಂತೆ ಎಚ್ಚೆತ್ತ ಡಿಕೆ ಸುರೇಶ್ ಅವರು ಜನರ ಮೇಲೆ ಹೇರಿ ಕೈತೊಳೆಯುವ ಪ್ರಯತ್ನ ಮಾಡಿದ್ದರು. ತಾವು ನೀಡಿರುವ ಹೇಳಿಕೆಗೆ ಸ್ಪಷ್ಟನೆ ನೀಡಿದ ಡಿಕೆ ಸುರೇಶ್​, ಜನರ ಭಾವನೆಗಳನ್ನು ಹೇಳಿದ್ದೇನೆಯೇ ಹೊರತು ಬೇರೇನೂ ಹೇಳಿಲ್ಲ ಎಂದು ಹೇಳಿದ್ದರು. ಅಲ್ಲದೆ, ನನ್ನ ಹೇಳಿಕೆಗೂ ಕಾಂಗ್ರೆಸ್ ಪಕ್ಷಕ್ಕೂ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದ್ದರು.

 
 

 

 
 

 

 
 

 

 
 

Leave a Reply

Your email address will not be published. Required fields are marked *