ಬೆಂಗಳೂರು : ಬೆಂಗಳೂರು, ಚಿಕ್ಕಮಗಳೂರು, ಹಾಸನ ಹಾಗೂ ಮಂಡ್ಯ ಸೇರಿದಂತೆ ರಾಜ್ಯದ ಹಲವೆಡೆ ಬುಧವಾರ ಬೆಳ್ಳಂಬೆಳಗ್ಗೆ ಸರ್ಕಾರಿ ಅಧಿಕಾರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್ ನೀಡಿದ್ದು, ಮಂಡ್ಯದ ಪಿಡಬ್ಲ್ಯೂಡಿ ಇಲಾಖೆಯಲ್ಲಿ ಇ.ಇ ಆಗಿರುವ ಅಧಿಕಾರಿ ಹರ್ಷ ಕಚೇರಿ ಹಾಗೂ ಮನೆಗಳ ಮೇಲೆ ದಾಳಿ ನಡೆಸಿದೆ.
ಬೆಂಗಳೂರಿನ ವಿದ್ಯಾರಣ್ಯಪುರದಲ್ಲಿರುವ ಮನೆ ಮೇಲೆ ಕೂಡ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ಹೇಳಲಾಗುತ್ತಿದ್ದು, ಮಂಡ್ಯ ಜಿಲ್ಲೆಯಲ್ಲಿರುವ ಸಂಬಂಧಿಕರ ಮನೆಗಳ ಮೇಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಮಂಡ್ಯದ ಕಚೇರಿ, ಕಲ್ಲಹಳ್ಳಿಯಲ್ಲಿರುವ ಮಾವನ ಮನೆ ನಾಗಮಂಗಲದಲ್ಲಿರುವ ಫಾರ್ಮ್ ಹೌಸ್ ನಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ. ಅದೇ ರೀತಿಯಾಗಿ ಚಿಕ್ಕಮಗಳೂರು ಹಾಸನದಲ್ಲೂ ಲೋಕಾಯುಕ್ತ ಅಧಿಕಾರಿಗಳು ಸರ್ಕಾರಿ ಅಧಿಕಾರಿಗಳ ಮನೆ ಕಚೇರಿ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ. ಈ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭಿಸಬೇಕಿದೆ.
ಉಡುಪಿ, ಮಂಗಳೂರಿನಲ್ಲಿ ಕೆಲಸ ಬೇಕೇ? ಸರ್ಕಾರಿ, ಅರೆಸರ್ಕಾರಿ, ಖಾಸಗಿ ಕಂಪೆನಿಗಳ ಉದ್ಯೋಗಾವಕಾಶಗಳ ಕುರಿತ ಸಂಪೂರ್ಣ ವಿವರಗಳಿಗೆ ಈ ಲಿಂಕ್ ಕ್ಲಿಕ್ ಮಾಡಿ
ಉಡುಪಿ, ಮಂಗಳೂರಿನಲ್ಲಿ ಕೆಲಸ ಬೇಕೇ? ಸರ್ಕಾರಿ, ಅರೆಸರ್ಕಾರಿ, ಖಾಸಗಿ ಕಂಪೆನಿಗಳ ಉದ್ಯೋಗಾವಕಾಶಗಳ ಕುರಿತ ಸಂಪೂರ್ಣ ವಿವರಗಳಿಗೆ ಈ ಲಿಂಕ್ ಕ್ಲಿಕ್ ಮಾಡಿ