Share this news

ಬೆಳಗಾವಿ: ಕೋಟೆ ಆವರಣದ ಕಿತ್ತೂರು ರಾಣಿ ಚನ್ನಮ್ಮ ವೇದಿಕೆಯಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಕಿತ್ತೂರು ಉತ್ಸವಕ್ಕೆ ಸೋಮವಾರ ಸಂಜೆ 7 ಗಂಟೆಗೆ ಚಾಲನೆ ದೊರೆಯಲಿದೆ.

ಕಿತ್ತೂರು ಉತ್ಸವದ ಉದ್ಘಾಟನಾ ಸಮಾರಂಭದಲ್ಲಿ ಚನ್ನಮ್ಮನ ಕಿತ್ತೂರು ರಾಜಗುರು ಸಂಸ್ಥಾನ ಕಲ್ಮಠದ ಮಡಿವಾಳ ರಾಜಯೋಗಿಂದ್ರ ಸ್ವಾಮೀಜಿ, ನಿಚ್ಚಣಕಿ ಗುರು ಮಡಿವಾಳೇಶ್ವರ ಮಠದ ಪಂಚಾಕ್ಷರಿ ಸ್ವಾಮೀಜಿ, ಕೂಡಲ ಸಂಗಮದ ಬಸವ ಜಯಮೃತ್ಯುಂಜಯ ಸ್ವಾಮೀಜಿ ವಹಿಸಲಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಈ ಸಮಾರಂಭವನ್ನು ಉದ್ಘಾಟಿಸಲಿದ್ದು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಕಿತ್ತೂರು ಶಾಸಕ ಬಾಬಾಸಾಹೇಬ್ ಪಾಟೀಲ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ.

ಕಿತ್ತೂರು ಉತ್ಸವಕ್ಕೆ ಸಿಎಂ ಗೈರು?
ಉತ್ಸವಕ್ಕೆ ಹೋದರೆ ಅಧಿಕಾರಕ್ಕೆ ಹೋಗುತ್ತದೆ ಎನ್ನುವ ಭಯದಿಂದ, ಈ ಸಲವೂ ಕಿತ್ತೂರು ಉತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಗೈರಾಗಲಿದ್ದಾರೆಯೇ ಎನ್ನುವ ಪ್ರಶ್ನೆ ಮೂಡಿದ್ದು, ಈ ಹಿಂದೆ ಮುಖ್ಯಮಂತ್ರಿಯಾಗಿದ್ದ 5 ವರ್ಷಗಳ ಅವಧಿಯಲ್ಲಿ ಉತ್ಸವಕ್ಕೆ ಗೈರಾಗಿದ್ದ ಸಿದ್ದರಾಮಯ್ಯ,ಕಿತ್ತೂರು ಉತ್ಸವವು ರಾಜ್ಯಮಟ್ಟದ ಉತ್ಸವವಾಗಿದ್ದು ಸಿಎಂ ಸಿದ್ದರಾಮಯ್ಯ ಮೌಢ್ಯಕ್ಕೆ ಹೆದರಿ ಕಾರ್ಯಕ್ರಮದಲ್ಲಿ ಭಾಗವಹಿಸುವುದಿಲ್ಲ ಎನ್ನಲಾಗುತ್ತಿದೆ. ರಾಜ್ಯದ ಮುಖ್ಯಮಂತ್ರಿಗಳ ಪೈಕಿ ಈವರೆಗೆ ಕೇವಲ ಮೂವರು ಸಿಎಂಗಳಾದ ಬಂಗಾರಪ್ಪ, ಜಗದೀಶ್ ಶೆಟ್ಟರ್, ಬಸವರಾಜ್ ಬೊಮ್ಮಾಯಿ ಮಾತ್ರ ಕಿತ್ತೂರು ಉತ್ಸವದಲ್ಲಿ ಭಾಗಿಯಾಗಿದ್ದರು. ಆದರೆ ಕಿತ್ತೂರು ಉತ್ಸವದಲ್ಲಿ ಪಾಲ್ಗೊಂಡ ಈ ಮೂವರು ಕಾಕತಾಳೀಯ ಎಂಬಂತೆ ಮತ್ತೊಮ್ಮೆ ಸಿಎಂ ಆಗಿಲ್ಲ.ಆದ್ದರಿಂದ ಸಿದ್ದರಾಮಯ್ಯ ಈ ಕಾರ್ಯಕ್ರಮಕ್ಕೆ ಭಾಗವಹಿಸಲಿದ್ದಾರೆಯೇ ಎನ್ನುವ ಕುತೂಹಲ ಮೂಡಿಸಿದೆ‌

 

 

 

 

 

 

 

 

Leave a Reply

Your email address will not be published. Required fields are marked *