ಬೆಳಗಾವಿ: ಬೆಳಗಾವಿ ಜಿಲ್ಲೆಯ ವಂಟಮೂರಿ ಗ್ರಾಮದಲ್ಲಿ ರಾಜ್ಯದ ಜನರೇ ಬೆಚ್ಚಿಬೀಳಿಸೋ ಘಟನೆ ನಡೆದಿದೆ. ಬೆಳಗಾವಿ ತಾಲೂಕಿ ವಂಟಮೂರಿ ಗ್ರಾಮದಲ್ಲಿ ನಡೆದಿದ್ದ ಘಟನೆ ಸಂಬAಧ ಇದೀಗ ಪೊಲೀಸರು 9 ಮಂದಿ ವಿರುದ್ಧ ಎಫ್ ಐಆರ್ ದಾಖಲಿಸಿದ್ದಾರೆ.
ಈ ಕುರಿತಂತೆ ವಂಟೂರಿ ಗ್ರಾಮದಲ್ಲಿ ಪೊಲೀಸ್ ಆಯುಕ್ತ ಎಸ್.ಎನ್ ಸಿದ್ದರಾಮಪ್ಪ ಮಾಹಿತಿ ನೀಡಿದ್ದು, ಮಹಿಳೆಯನ್ನು ಬೆತ್ತಲೆಗೊಳಿಸಿ ಹಲ್ಲೆ ನಡೆಸಿದ್ದಾರೆ. ಮಹಿಳೆಯ ಮಗ ಮತ್ತು ಗ್ರಾಮದ ಯುವತಿ ಪ್ರೀತಿಸಿ ಓಡಿ ಹೋಗಿದ್ದಕ್ಕೆ ಯುವಕನ ತಾಯಿಯ ಮೇಲೆ ಈ ರೀತಿ ಮಾಡಲಾಗಿದೆ ಎಂದರು. ನಮ್ಮ ಸಿಬ್ಬಂದಿ ಮಹಿಳೆಯನ್ನು ರಕ್ಷಿಸಿ, ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಕುರಿತು ಮಹಿಳೆಯು ಸೇರಿದಂತೆ 9 ಮಂದಿಯ ವಿರುದ್ಧ ಕಾಕತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದರು. ಮಲಗಿದ್ದ ಯುವಕನ ತಾಯಿಯನ್ನು ಯುವತಿಯ ಕುಟುಂಬಸ್ಥರು ಎಲೆದುಕೊಂಡು ಬಂದು ಬೆತ್ತಲೆಗೊಳಿಸಿ ಮೆರವಣಿಗೆ ಮಾಡಿ, ಕಂಬಕ್ಕೆ ಕಟ್ಟಿ ಹಲ್ಲೆ ನಡೆಸಿದ್ದಾರೆ. ಹಲ್ಲೆ ನಡೆಸಿದ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಕೆಲವರನ್ನು ಬಂಧಿಸಲಾಗಿದೆ. ಇನ್ನೂ ಕೆಲವರು ಪರಾರಿಯಾಗಿದ್ದು ಅವರ ಪತ್ತೆಗಾಗಿ ಕ್ರಮವಹಿಸಲಾಗಿದೆ ಎಂಬುದಾಗಿ ತಿಳಿಸಿದ್ದಾರೆ.