ಮೂಡುಬಿದಿರೆ: ಮೂಡುಬಿದಿರೆ ತಾಲೂಕಿನ ಬೆಳುವಾಯಿ ಎಂಬಲ್ಲಿ ವ್ಯಕ್ತಿಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬೆಳುವಾಯಿ ಬರಕಲಗುತ್ತು ಮನೆಯ ರಾಮಣ್ಣ ಅವರ ಪುತ್ರ ಸಂತೋಷ್ ಪೂಜಾರಿ (42 ವರ್ಷ) ಆತ್ಮಹತ್ಯೆ ಮಾಡಿಕೊಂಡವರು. ಮೂಡಬಿದ್ರೆಯ ಎಲೆಕ್ಟ್ರಿಕ್ ಅಂಗಡಿಯಲ್ಲಿ ಎಲೆಕ್ಟ್ರಿಕ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಸಂತೋಷ್ ಇಂದು (ಗುರುವಾರ) ಮುಂಜಾನೆ ಮನೆಯ ಪಕ್ಕದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಮನೆಗೆ ಆಧಾರ ಸ್ತಂಭವಾಗಿದ್ದ ಸಂತೋಷ್ ಪತ್ನಿ ಹಾಗೂ ಸಣ್ಣ ವಯಸ್ಸಿನ ಇಬ್ಬರು ಅವಳಿ ಪುತ್ರಿಯರನ್ನು ಅಗಲಿದ್ದಾರೆ.