Share this news

ಮAಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕು ಪುದುವೆಟ್ಟು ನಿವಾಸಿ ಯುವ ಕಬಡ್ಡಿ ಆಟಗಾರ ಸ್ವರಾಜ್(24) ಆತ್ಮಹತ್ಯೆ ಪ್ರಕರಣಕ್ಕೆ  ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಲೋನ್ ಆ್ಯಪ್ ಕಿರುಕುಳಕ್ಕೆ ಬೇಸತ್ತು ಸ್ವರಾಜ್ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಸ್ವರಾಜ್ ತನ್ನ ವಾಟ್ಸಾಪ್‌ನಲ್ಲಿ ಅಕ್ಕನ ಮಗಳ ಫೋಟೋ ಹಾಕಿದ್ದ. ಈ ಫೋಟೋವನ್ನು ಲೋನ್ ಆ್ಯಪ್‌ನವರು ‘Baby for sale’ ಎಂದು ಎಡಿಟ್ ಮಾಡಿ ಸ್ವರಾಜ್ ಸ್ನೇಹಿತರು, ಕಾಂಟಾಕ್ಟ್ ಲಿಸ್ಟ್ ನಲ್ಲಿರುವವರಿಗೆ ಫಾರ್ವರ್ಡ್ ಮಾಡಲಾಗಿತ್ತು. ಈ ರೀತಿಯ ಬ್ಲಾಕ್ ಮೇಲ್ ತಡೆಯಲಾಗದೇ ಆಗಸ್ಟ್ 30 ರಂದು 30 ಸಾವಿರ ರೂಪಾಯಿ ಕಟ್ಟಿದ್ದ. ಆದರೂ ಇನ್ನಷ್ಟು ಹಣ ಕೊಡಬೇಕೆಂದು ಆ.31 ರಂದು ಮಧ್ಯಾಹ್ನ 2 ಗಂಟೆಗೆ ಡೆಡ್ ಲೈನ್ ನೀಡಿಲಾಗಿತ್ತು. ಇದರಿಂದ ಒತ್ತಡ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಈ ಬಗ್ಗೆ ತನಿಖೆ ಕೈಗೆತ್ತಿಕೊಂಡಿರುವ ಧರ್ಮಸ್ಥಳ ಪೊಲೀಸರು ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದಾರೆ.

ಬೆಳ್ತಂಗಡಿಯ ಪುದುವೆಟ್ಟು ನಿವಾಸಿ ಸ್ವರಾಜ್(24) ನಿನ್ನೆ(ಆಗಸ್ಟ್ 31) ಸ್ನಾನದ ಕೊಠಡಿಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದ, ಉಜಿರೆಯ ಸಾನಿಧ್ಯ ಖಾಸಗಿ ಕಂಪೆನಿಯ ಉದ್ಯೋಗಿಯಾಗಿದ್ದ ಸ್ವರಾಜ್ ಜಿಲ್ಲಾ ಮಟ್ಟದಲ್ಲಿ ಕಬಡ್ಡಿಯಲ್ಲಿ ಹೆಸರು ಗಳಿಸಿದ್ದ.

 

 

Leave a Reply

Your email address will not be published. Required fields are marked *