Share this news

ಕಾರ್ಕಳ: ಕಾರ್ಕಳ ತಾಲೂಕಿನ ಗ್ರಾಮ ಪಂಚಾಯಿತಿಗೆ ಎರಡನೆಯ ಅವಧಿಗೆ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆಯ ಮಂಗಳವಾರ ನಡೆಯಿತು.

ಅಧ್ಯಕ್ಷ ಸ್ಥಾನವು ಸಾಮಾನ್ಯ ಮಹಿಳೆಗೆ ಮೀಸಲಾಗಿದ್ದು, ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ರಾಮೇಶ್ವರಿ ಶೆಟ್ಟಿ ಹಾಗೂ ಬಿಜೆಪಿ ಬೆಂಬಲಿತ ಬಂಡಾಯ ಅಭ್ಯರ್ಥಿಯಾಗಿ ನ್ಯಾಯವಾದಿ ಸಹನಾ ಕುಂದರ್ ಸ್ಪರ್ಧಿಸಿದ್ದರು.
ಈ ಪೈಕಿ ರಾಮೇಶ್ವರಿ ಶೆಟ್ಟಿ 11 ಮತಗಳನ್ನು ಗಳಿಸಿ ಜಯಗಳಿಸಿದರೆ ಸಹನಾ ಕುಂದರ್ ಕೇವಲ 6 ಮತಗಳನ್ನು ಪಡೆದು ಪರಾಭವಗೊಂಡರು.
ಉಪಾಧ್ಯಕ್ಷ ಸ್ಥಾನವು ಸಾಮಾನ್ಯ ವರ್ಗಕ್ಕೆ ಮೀಸಲಾಗಿದ್ದು, ಈ ಸ್ಥಾನಕ್ಕೆ ಅಭ್ಯರ್ಥಿಯಾಗಿ ಸಂತೋಷ್ ಅಮೀನ್ ಹಾಗೂ ಬಂಡಾಯ ಅಭ್ಯರ್ಥಿಯಾಗಿ ದೇವೇಂದ್ರ ನಾಯಕ್ ಸ್ಪರ್ಧಿಸಿದ್ದರು. ಈ ಪೈಕಿ ಸಂತೋಷ್ ಅಮೀನ್ 11 ಮತಗಳನ್ನು ಪಡೆದು ಉಪಾಧ್ಯಕ್ಷರಾಗಿ ಆಯ್ಕೆಯಾದರೆ, ದೇವೇಂದ್ರ ನಾಯಕ್ ಕೇವಲ 11 ಮತಗಳನ್ನು ಪಡೆದು ಸೋಲನ್ನು ಅನುಭವಿಸಿದ್ದಾರೆ.
ಒಟ್ಟು 18 ಸದಸ್ಯ ಬಲದ ಬೆಳ್ಮಣ್ ಪಂಚಾಯಿತಿಯಲ್ಲಿ 11 ಬಿಜೆಪಿ ಬೆಂಬಲಿತರು 4 ಕಾಂಗ್ರೆಸ್ ಬೆಂಬಲಿತರು ಹಾಗೂ ಮೂರು ಪಕ್ಷೇತರ ಸದಸ್ಯರು ಚುನಾವಣೆಯಲ್ಲಿ ಭಾಗಿಯಾಗಿದ್ದರು.
ಲೋಕೋಪಯೋಗಿ ಇಲಾಖೆಯ ಸಹಾಯಕ ಅಭಿಯಂತರ ಮಿಥುನ್ ಚುನಾವಣಾ ಪ್ರಕ್ರಿಯೆ ನಡೆಸಿಕೊಟ್ಟರು.

Leave a Reply

Your email address will not be published. Required fields are marked *